ಫ್ರೇಜರ್ ಟೌನ್ ಅತ್ಯಾಚಾರ ಪ್ರಕರಣ: ಇನ್ಸ್ ಪೆಕ್ಟರ್ ರಫಿ ಬಿಡುಗಡೆ

ಬೆಂಗಳೂರು: ಫ್ರೇಜರ್ ಟೌನ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ಪುಲಿಕೇಶಿನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮದ್ ರಫಿ ಅವರನ್ನು ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಇಂದು ಬೆಳಗ್ಗೆ ಬಂಧಿತರಾಗಿದ್ದ ಮಹಮದ್ ರಫಿ ಅವರನ್ನು ಸಂಜೆ ಬಿಡುಗಡೆ ಮಾಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿನಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ್ ಅವರು ಮಹಮದ್ ರಫಿ ಅವರನ್ನು ಬಂಧಿಸಿದ್ದರು. ಮಹಮದ್ ರಫಿ ಅವರ ವಿರುದ್ಧ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 166ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿತ್ತು.
ಷರತ್ತುಬದ್ದ ಜಾಮೀನಿನ ಮೇಲೆ ರಫಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿಡುಗಡೆ ಬಳಿಕ ಮಾತನಾಡಿದ ರಫಿ ಅವರು ತಾವು ಯಾವುದೇ ರೀತಿಯ ತಪ್ಪು ಮಾಡಿಲ್ಲ. ನನ್ನ ಕರ್ತವ್ಯಕ್ಕೆ ಲೋಪ ಬರುವಂತೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಪುಲಿಕೇಶಿ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಮಹಮದ್ ರಫಿ ಅವರು ಯುವತಿ ದೂರು ನೀಡಲು ಬಂದಾಗ ಪ್ರಕರಣವನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲು ಮುಂದಾಗಿದ್ದರು. ಈ ವಿಚಾರ ಬೆಳಕಿಗೆ ಬಂದ ನಂತರ ರಫಿ ವಿರುದ್ಧ ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ತಮ್ಮ ವಿರುದ್ದ ದೂರು ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಹಮದ್ ರಫಿ ಅವರನ್ನು ಹಲಸೂರು ಗೇಟ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


