ಫ್ರೇಜರ್ಟೌನ್ ಅತ್ಯಾಚಾರ ಪ್ರಕರಣ: ಇನ್ಸ್ಪೆಕ್ಟರ್ ರಫಿ ಬಂಧನ

ಬೆಂಗಳೂರು: ಫ್ರೇಜರ್ಟೌನ್ನಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪ ಹೊತ್ತು ನಾಪತ್ತೆಯಾಗಿದ್ದ ಇನ್ಸ್ಪೆಕ್ಟರ್ ಮಹಮದ್ ರಫಿ ಅವರನ್ನು ಶುಕ್ರವಾರ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಹಲಸೂರು ಗೇಟ್ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ್ ಅವರು ಮಹಮದ್ ರಫಿ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ಮಹಮದ್ ರಫಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಫ್ರೇಜರ್ಟೌನ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳಿಂದ ತೀವ್ರ ಮುಜುಗರಕ್ಕೀಡಾಗಿದ್ದ ರಾಜ್ಯ ಸರ್ಕಾರ ಕರ್ತವ್ಯಲೋಪ ಆರೋಪದ ಮೇಲೆ ಇನ್ಸ್ಪೆಕ್ಟರ್ ಮಹಮದ್ ರಫಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿತ್ತು.
ಪುಲಿಕೇಶಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಮಹಮದ್ ರಫಿ ಅವರು ಯುವತಿ ದೂರು ನೀಡಲು ಬಂದಾಗ ಪ್ರಕರಣವನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲು ಮುಂದಾಗಿದ್ದರು. ಈ ವಿಚಾರ ಬೆಳಕಿಗೆ ಬಂದ ನಂತರ ರಫಿ ವಿರುದ್ಧ ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅಲ್ಲದೆ ಇನ್ಸ್ಪೆಕ್ಟರ್ ರಫಿ ವಿರುದ್ಧ ಪುಲಿಕೇಶಿ ನಗರದ ಪೊಲೀಸರು 166ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ತಮ್ಮ ವಿರುದ್ದ ದೂರು ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಹಮದ್ ರಫಿ ಅವರನ್ನು ಹಲಸೂರು ಗೇಟ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಇಂದು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


