ಫ್ರೇಜರ್ಟೌನ್ "ಅತ್ಯಾಚಾರ": ಆರೋಪಿಗಳಿಂದ ತಪ್ಪೊಪ್ಪಿಗೆ

ಬೆಂಗಳೂರು: ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ನಡೆದ ಯುವತಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳು ತಪ್ಪೋಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ಪ್ರಮುಖ ಆರೋಪಿ ನಾಸಿರ್ ಎಂಬಾತ ನೀಡಿದ್ದ ಮಾಹಿತಿಯ ಮೇರೆಗೆ ಇಂದು ಕಾರ್ಯಾಚರಣೆ ನಡೆಸಿದ ಪುಲಿಕೇಶಿ ನಗರ ಪೊಲೀಸರು ಇಂದು ದಾವೂದ್, ಶೋಯೆಬ್ ಮತ್ತು ಹಫೀಜ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ ಆರೋಪಿ ನಾಸಿರ್ ಸೇರಿದಂತೆ ಎಲ್ಲ ನಾಲ್ವರು ಆರೋಪಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಇದೀಗ ತಮ್ಮ ತಪ್ಪು ಒಪ್ಪಿಕೊಂಡಿರುವ ಆರೋಪಿಗಳು ಯುವತಿಯನ್ನು ಅತ್ಯಾಚಾರ ಮಾಡಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪೂರ್ವ ವಲಯ ಡಿಸಿಪಿ ಮಂಜುನಾಥ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಪಿಗಳು ತಮ್ಮ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಸಾಕ್ಷ್ಯಾಧಾರಗಳಿಂದ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ. ಪ್ರಮುಖ ಸಾಕ್ಷಿಗಳು ಕೂಡ ದೊರೆತಿವೆ ಎಂದು ಹೇಳಿದರು.
ಪೊಲೀಸರ ದಿಕ್ಕು ತಪ್ಪಿಸಿದ್ದ ನಾಸಿರ್
ಇದೇ ವೇಳೆ ಪ್ರಕರಣದಿಂದ ಪಾರಾಗಲು ಯತ್ನಿಸಿದ್ದ ಪ್ರಕರಣದ ಪ್ರಮುಖ ಆರೋಪಿ ನಾಸಿರ್ ತನಿಖೆಯ ಮತ್ತು ಪೊಲೀಸರ ದಿಕ್ಕು ತಪ್ಪಿಸಲು ಹವಣಿಸಿದ್ದ ಎಂದು ತಿಳಿದು ಬಂದಿದೆ.
ಒಟ್ಟಾರೆ ಕಳೆದ ಹಲವು ದಿನಗಳಿಂದ ಕರ್ನಾಟಕದ ಜನತೆಯ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಪ್ರಮುಖ ತಿರುವು ದೊರೆತಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವ ಆಶಾಭಾವ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


