ಈಗಿನ ಸುದ್ದಿ

'ರುದ್ರಮದೇವಿ' ಚಿತ್ರೀಕರಣ ಘಟಕದಲ್ಲಿ ಭಾರಿ ಕಳವು

'ರುದ್ರಮದೇವಿ' ಚಿತ್ರೀಕರಣ ಘಟಕದಲ್ಲಿ ಭಾರಿ ಕಳವು
Published On :

ಹೈದರಾಬಾದ್: ತೆಲುಗಿನ ಖ್ಯಾತ ನಟಿ ಅನುಷ್ಕಾ ಅಭಿನಯದ ರುದ್ರಮದೇವಿ ಚಿತ್ರದ ಚಿತ್ರೀಕರಣದ ವೇಳೆ ಕಳ್ಳರು ಕೈಚಳಕ ತೋರಿದ್ದು, ಸುಮಾರು 1.5 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಹೊತ್ತೊಯ್ದಿದ್ದಾರೆ.

ಹೈದರಾಬಾದ್‌ನ ಗಚ್ಚಿಬೌಲಿ ಪ್ರದೇಶದಲ್ಲಿ ರುದ್ರಮದೇವಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ವಿಶೇಷ ಸನ್ನಿವೇಶಕ್ಕಾಗಿ ಚಿನ್ನದ ಆಭರಣಗಳನ್ನು ತರಿಸಲಾಗಿತ್ತು. ಉಧ್ಯಮಿ ರವಿ ಎಂಬುವವರು ಆಭರಣಗಳನ್ನು ತಂದಿದ್ದರು. ಇದೀಗ ಚಿತ್ರೀಕರಣ ಘಟಕದಲ್ಲಿಯೇ ತಮ್ಮ ಕೈಚಳಕ ತೋರಿರುವ ಕಳ್ಳರು ಭಾರಿ ಪ್ರಮಾಣದ ಆಭರಣಗಳನ್ನು ಅಪಹರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಧ್ಯಮಿ ರವಿ ಅವರು ಗಚ್ಚಿಬೌಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರುದ್ರಮದೇವಿ ಚಿತ್ರವ ಐತಿಹಾಸಿಕ ಕಥಾಹಂದರವುಳ್ಳ ಚಿತ್ರವಾಗಿದ್ದು, ಚಿತ್ರವನ್ನು ತೆಲುಗಿನ ಖ್ಯಾತ ನಿರ್ದೇಶಕ ಗುಣಶೇಖರ್ ಅವರು ನಿರ್ದೇಶಿಸುತ್ತಿದ್ದಾರೆ. ನಾಯಕಿಯ ಪಾತ್ರದಲ್ಲಿ ನಟಿ ಅನುಷ್ಕಾ ಅವರು ಅಭಿನಯಿಸುತ್ತಿದ್ದು, ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟ ಅಲ್ಲು ಅರ್ಜುನ್ ಅವರು ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.