ಗಗೋಯ್ ವಿರುದ್ಧ ಅಸಮಾಧಾನ: 32 'ಕೈ' ಶಾಸಕರ ರಾಜಿನಾಮೆ..?

ದಿಸ್ಪುರ: ಅಸ್ಸಾಂ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, 32 ಶಾಸಕರು ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದಿಂದ ಟೀಕೆಗೆ ಒಳಗಾಗಿದ್ದ ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ಇದೀಗ ತಮ್ಮದೇ ಶಾಸಕರಿಂದ ಭಿನ್ನಮತದ ಬಿಸಿ ಅನುಭವಿಸುವಂತಾಗಿದೆ. ಮುಖ್ಯಮಂತ್ರಿ ತರುಣ್ ಗಗೋಯ್ ಅವರ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಹೇಳಿರುವ ಶಾಸಕರು ರಾಜ್ಯಪಾಲರಿಗೆ ತಮ್ಮ ರಾಜಿನಾಮೆ ಪತ್ರವನ್ನು ರವಾನಿಸುವುದಾಗಿ ಹೇಳಿದ್ದಾರೆ.
ಮತ್ತೊಂದು ಪ್ರಮುಖ ಅಂಶವೆಂದರೆ ಈ 32 ಬಂಡಾಯ ಶಾಸಕರ ಪೈಕಿ ಗಗೋಯ್ ಸಂಪುಟದ ಸಚಿವರೊಬ್ಬರು ಸೇರಿರುವುದು ವಿಶೇಷವಾಗಿದೆ. ಗಗೋಯ್ ಸಂಪುಟದಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಸಚಿವರಾಗಿರುವ ಹಿಮಂತ ಬಿಸ್ವಾ ಶರ್ಮಾ ಅವರು ಬಂಡಾಯ ಶಾಸಕರ ನೇತೃತ್ವವಹಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅಸ್ಸಾಂ ಕಾಂಗ್ರೆಸ್ನಲ್ಲಿ ಬಂಡಾಯ ಸ್ಫೋಟಗೊಂಡಿದ್ದು, ತರುಣ್ ಗಗೋಯ್ ನಾಯಕತ್ವವನ್ನು ಬದಲಿಸುವಂತೆ ಬಂಡಾಯ ಶಾಸಕರು ಆಗ್ರಹಿಸುತ್ತಿದ್ದಾರೆ. ಹೀಗಾಗಿ ಈ ಹಿಂದೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ತರುಣ್ ಗಗೋಯ್ ಅವರು ಪಕ್ಷದ ಪ್ರಸಕ್ತ ಬೆಳವಣಿಗೆಗಳನ್ನು ವಿವರಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪರೀಕ್ಷಕರಾಗಿ ಆಗಮಿಸಿದ್ದ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ವರದಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಮನುಸಿಂಘ್ವಿ ಅವರು, ಅಸ್ಸಾಂ ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕತ್ವ ಬದಲಾವಣೆ ಕುರಿತಂತೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


