ಈಗಿನ ಸುದ್ದಿ

ಮಾರಣಾಂತಿಕ ಹಲ್ಲೆ; ಮಣಿಪುರ ಯುವಕ ಸಾವು

ಮಾರಣಾಂತಿಕ ಹಲ್ಲೆ; ಮಣಿಪುರ ಯುವಕ ಸಾವು
Published On :

ನವದೆಹಲಿ: 6 ಮಂದಿಯ ಗುಂಪೊಂದು ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಮಣಿಪುರದಲ್ಲಿ ನಡೆದಿದೆ.

ಬಿಪಿಒ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಲೋನಿ(30) ಎಂಬ ಯುವಕ ಕೆಲಸ ಮುಗಿಸಿ ರಾತ್ರಿ ತನ್ನ ಇಬ್ಬರು ಗೆಳಯರೊಂದಿಗೆ ಮನೆಗೆ ತೆರಳುತ್ತಿದ್ದಾಗ, 6 ಜನರ ಗುಂಪೊಂದು ಕಾರಿನಲ್ಲಿ ಬಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ವಿಷಯ ತಿಳಿದ ಕೂಡಲೇ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ತದ ಮಡುವಿನಲ್ಲಿದ್ದ ಯುವಕನನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಶಲೋನಿಯನ್ನು ವೈದ್ಯರು ಪರೀಕ್ಷಿಸಿದಾಗ ಅದಾಗಲೇ ಆತ ಮೃತಪಟ್ಟಿರುವುದು ತಿಳಿಯುತ್ತದೆ.

ಘಟನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸರು ಯುವಕ ಮೂಲತಃ ಅಸ್ಸಾಂ ತಾಲೂಕಿನ ತಂಜಾಯ್ ಹಳ್ಳಿಯ ನಿವಾಸಿಯಾಗಿದ್ದು, ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ವಾಸವಿದ್ದ. ದೆಹಲಿಯ ಬಿಪಿಒ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ರಾತ್ರಿ ಪಾಳಿಯ ಕೆಲಸ ಮುಗಿಸಿ, ಮಣಿಪುರ ಹಾಗೂ ಬಿಹಾರದ ತನ್ನಿಬ್ಬರು ಸ್ನೇಹಿತರೊಂದಿಗೆ ಕಾಲು ದಾರಿಯಲ್ಲಿ ಹೋಗುವಾಗ, 6 ಜನರ ಗುಂಪೊಂದು ಕಾರಿನಿಂದ ಬಂದು ದಾಳಿ ಮಾಡಿದೆ. ಈ ವೇಳೆ ಯುವಕನ ಗೆಳೆಯರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಪ್ರಕರಣ ಸಂಬಂಧ ಈಗಾಗಲೇ 3 ಜನರನ್ನು ಬಂಧಿಸಿದ್ದು, ಇನ್ನುಳಿದವರಿಗಾಗಿ ಸ್ಥಳದಲ್ಲಿರುವ ಸಿಸಿಟಿವಿಗಳ ವಿಡಿಯೋಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.