ಈಗಿನ ಸುದ್ದಿ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ
Published On :

ಬೆಂಗಳೂರು: ವಸತಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಪ್ರತಿಭಟನಾ ಮೆರವಣಿಗೆ ಮೂಲಕ ಪ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಜೆಡಿಎಸ್ ಕಚೇರಿ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಶಾಸಕಿ ವೈ. ರಾಮಕ್ಕ ಸೇರಿದಂತೆ ಹಲವು ಪ್ರತಿಭಟನಾ ನಿರತ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

ವಸತಿ ಯೋಜನೆಯಲ್ಲಿ ಹಿಂದೂಳಿದ, ದಲಿತ ಹಾಗೂ ಕೊಳಗೇರಿ ನಿವಾಸಿಗಳಿಗೆ ಸೂಕ್ತ ವಸತಿ ಸಿಗುತ್ತಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.