ಈಗಿನ ಸುದ್ದಿ

ದೆಹಲಿ ಪೊಲೀಸ್ ಪ್ರಧಾನ ಕಾರ್ಯಾಲಯದಲ್ಲಿ ಅಗ್ನಿ ಆಕಸ್ಮಿಕ

ದೆಹಲಿ ಪೊಲೀಸ್ ಪ್ರಧಾನ ಕಾರ್ಯಾಲಯದಲ್ಲಿ ಅಗ್ನಿ ಆಕಸ್ಮಿಕ
Published On :

ನವದೆಹಲಿ: ಮಂಗಳವಾರ ದೆಹಲಿ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಬೆಳಗ್ಗೆ 7.10ಕ್ಕೆ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಲರಾಂ ಕೇಳಿಸಿದೆ. ತಕ್ಷಣವೇ ಅಗ್ನಿಶಾಮಕ ದಳದ 8 ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಕೆಲವು ತಿಂಗಳುಗಳ ಹಿಂದೆಯಷ್ಟೇ ಇದೇ ಕಟ್ಟಡದ 10ನೇ ಮಹಡಿಯಲ್ಲಿ ಮತ್ತು ಪಿಆರ್‌ಒ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದೀಗ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಇದು ಮೂರನೇ ಬಾರಿಯಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದರಿಂದ ಜನರು ಜೀವಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.