ಸಂಸತ್ತಿನಲ್ಲಿ ಪ್ರತಿಧ್ವನಿಸಿದ 'ನ್ಯಾಯಾಂಗ ಭ್ರಷ್ಟಾಚಾರ'
ನವದೆಹಲಿ: ನ್ಯಾಯಾಧೀಶರ ನೇಮಕದಲ್ಲೂ ರಾಜಕೀಯ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷ ನ್ಯಾ.ಮಾರ್ಕಡೇಯ ಕಾಟ್ಟು ಅವರ ಹೇಳಿಕೆ ಎರಡನೇ ದಿನವೂ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿತು.
ಈ ಕುರಿತು ಲೋಕಸಭೆಯಲ್ಲಿ ಹೇಳಿಕೆ ನೀಡಿದ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು, 'ನಾವು ಗಡಿಯಾರವನ್ನು ಮತ್ತೆ ಹಿಂದಕ್ಕೆ ತಿರುಗಿಸಲು ಸಾಧ್ಯವಿಲ್ಲ. ಅವಧಿ ವಿಸ್ತರಣೆಗೊಂಡ ಹೆಚ್ಚುವರಿ ಜಡ್ಜ್ ಈಗ ಜೀವಿಸಿಲ್ಲ. ಸುಪ್ರೀಂಕೋರ್ಟ್ ಸಮಿತಿಯಲ್ಲಿದ್ದವರು ಈಗ ನಿವೃತ್ತರಾಗಿದ್ದಾರೆ. ನಮ್ಮ ಮುಂದೆ ಉಳಿದಿರುವ ಮಾರ್ಗ ಜಡ್ಜ್‌ಗಳ ನೇಮಕ ವ್ಯವಸ್ಥೆ ಸುಧಾರಿಸುವುದು' ಎಂದರು.
ಆದರೆ ರವಿಶಂಕರ್ ಅವರ ಉತ್ತರದಿಂದ ತೃಪ್ತರಾಗದ ಅಣ್ಣಾಡಿಎಂಕೆ ಸದಸ್ಯರು ಕಾಟ್ಟು, ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ಒತ್ತಡ ಹೇರಿದ ಸಚಿವರ ಹೆಸರು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿ ಕಾಲಪಕ್ಕೆ ಅಡ್ಡಿಪಡಿಸಿದರು. ಇದರಿಂದ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು.
ಇನ್ನು ಕಾಟ್ಟು ಹೇಳಿಕೆ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು, ಡಿಎಂಕೆ ಒತ್ತಡದ ಹಿನ್ನೆಲೆಯಲ್ಲಿ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕಳಂಕಿತ ಹೆಚ್ಚುವರಿ ಜಡ್ಜ್‌ಗೆ ಅಧಿಕಾರ ವಿಸ್ತರಣೆ ಮಾಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ ಈ ಕುರಿತು ಅಂದಿನ ಕಾನೂನು ಸಚಿವ ಎಚ್.ಆರ್.ಭಾರದ್ವಾಜ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಲಹೋಟಿ ಜತೆಗೆ ಚರ್ಚೆ ನಡೆಸಿದ್ದರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

