ಈಗಿನ ಸುದ್ದಿ

ಆ.25ರಂದು ಇಂಡೋ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಭೇಟಿ

ಆ.25ರಂದು ಇಂಡೋ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಭೇಟಿ
Published On :

ನವದೆಹಲಿ: ಮುಂಬರುವ ಆಗಸ್ಟ್ 25ರಂದು ಭಾರತ ಮತ್ತು ಪಾಕಿಸ್ತಾನ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಭೇಟಿ ಮಾಡಲಿದ್ದು, ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸಭೆ ಆಯೋಜಿಸಲಾಗಿದೆ.

ಸತತ ಒಂದೂವರೆ ವರ್ಷದ ಬಳಿಕ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ದೇಶಗಳ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಸಭೆ ಸೇರುತ್ತಿದ್ದು, ಇದೇ ಆಗಸ್ಟ್ 25ರಂದು ಇಸ್ಲಾಮಾಬಾದ್‌ನಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಪಾಕಿಸ್ತಾನ ಸೈನಿಕರಿಂದ ಪದೇ ಪದೇ ಆಗುತ್ತಿರುವ ಕದನ ವಿರಾಮ ಉಲ್ಲಂಘನೆ ಮತ್ತು ಗಡಿಯಲ್ಲಿ ಪಾಕ್ ಸೈನಿಕರು ಇಬ್ಬರು ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ವಿಚಾರಗಳು ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಕಳೆದ ವರ್ಷ ಜನವರಿಯಲ್ಲಿ ಪಾಕಿಸ್ತಾನ ಸೈನಿಕರು ಭಾರತೀಯ ಸೈನಿಕರನ್ನು ಅಪಹರಿಸಿ ಕ್ರೂರವಾಗಿ ಕೊಂದುಹಾಕಿದ್ದರು. ಬಳಿಕ ಅವರ ತಲೆ ರಹಿತ ದೇಹಗಳನ್ನು ಭಾರತಕ್ಕೆ ರವಾನಿಸಿದ್ದರು. ಘಟನೆಯಿಂದ ತೀವ್ರ ಆಕ್ರೋಶಗೊಂಡಿದ್ದ ಭಾರತ ಸರ್ಕಾರ ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಮಾತುಕತೆಯನ್ನು ಸ್ಥಗಿತಗೊಳಿಸಿತ್ತು. ಪಾಕ್ ಸೈನಿಕರ ದುರ್ವರ್ತನೆ ಕುರಿತಂತೆ ಭಾರತದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸತತ 18 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಸಭೆ ಸೇರುತ್ತಿದ್ದು, ಈ ಹಿಂದೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಕೇಂದ್ರಸರ್ಕಾರದ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದರು. ಆ ಮೂಲಕ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆಗೆ ಮತ್ತೆ ಚಾಲನೆ ದೊರೆಯುವಂತಾಗಿತ್ತು. ಇದೀಗ ಇಸ್ಲಾಮಾಬಾದ್‌ನಲ್ಲಿ ಸಭೆ ನಡೆಸುವಂತೆ ಪಾಕಿಸ್ತಾನ ಭಾರತಕ್ಕೆ ಆಹ್ವಾನ ನೀಡಿದ್ದು, ಪಾಕಿಸ್ತಾನದ ಅಹ್ವಾನವನ್ನು ಭಾರತ ಸ್ವೀಕರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.