ಕಣ್ಸನ್ನೆ ಮೂಲಕ ಶೂಮಾಕರ್ ಮಾತುಕತೆ

ನವದೆಹಲಿ: ಅಪಘಾತಕ್ಕೊಳಗಾಗಿ ಇತ್ತೀಚೆಗಷ್ಟೇ ಕೋಮಾದಿಂದ ಮರಳಿದ್ದ ಫಾರ್ಮುಲಾ ಒನ್ ವಿಶ್ವ ಚಾಂಪಿಯನ್ ಚಾಲಕ ಮೈಕೆಲ್ ಶೂಮಾಕರ್ ಅವರು, ಕಣ್ ಸನ್ನೆ ಮೂಲಕ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ತಮ್ಮ ಪತ್ನಿ ಕರೋನ್ನಾ ಅವರೊಂದಿಗೆ ಶೂಮಾಕರ್ ಅವರು ಮಾತನಾಡುತ್ತಿದ್ದು, ಕೇವಲ ಕಣ್ ಸನ್ನೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೂಮಾಕರ್ ಅವರ ಆರೋಗ್ಯ ಪರಿಸ್ಥಿತಿ ನಿಧಾನಗತಿಯದ್ದೇ ಆಗಿದ್ದರೂ, ಅವರ ಆರೋಗ್ಯ ಚೇತರಿಕೆ ಕಾಣುತ್ತಿದೆ ಎಂದು ಅವರನ್ನು ಉಪಚರಿಸುತ್ತಿರುವ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಪ್ರಮುಖ ದಿನಪತ್ರಿಕೆ ಡೈಲಿ ಮಿರರ್ ವರದಿ ಮಾಡಿರುವಂತೆ ಈಗಲೂ ಶೂಮಾಕರ್ ಅವರು ಹಾಸಿಗೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದು, ಕಣ್ ಸನ್ನೆ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಶೂಮಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿರುವ ಸ್ವಿಸ್ ಆಸ್ಪತ್ರೆಯಲ್ಲಿ ಅವರಿಗೆಂದೇ ವಿಶೇಷ ವಿದ್ಯುತ್ ಚಾಲಿತ ವ್ಹೀಲ್ ಚೇರ್ ಅನ್ನು ತರಿಸಲಾಗಿದ್ದು, ಅದು ಕೇವಲ ಶಬ್ದಗಳ ಮೂಲಕವೇ ಅದು ನಿಯಂತ್ರಣಗೊಳ್ಳುತ್ತದೆ. ಆದರೆ ಪ್ರಸ್ತುತ ಶೂಮಾಕರ್ ಅವರು ಕಣ್ ಸನ್ನೆ ಮೂಲಕ ಮಾತನಾಡುತ್ತಿದ್ದು, ಶೀಘ್ರದಲ್ಲಿ ಮಾತನಾಡುತ್ತಾರೆ ಎಂದು ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿ ಮಾಡಿದೆ.
ಕಳೆದ ಡಿಸೆಂಬರ್ 29ರಂದು ಫ್ರೆಂಚ್ ರೆಸಾರ್ಟ್ ಆಫ್ ಮೆರಿಬೆಲ್ನಲ್ಲಿ ಸ್ಕೀಯಿಂಗ್ ಮಾಡುತ್ತಿದ್ದ ವೇಳೆ ಶೂಮಾಕರ್ ಅವರು ಅಪಘಾತಕ್ಕೀಡಾಗಿದ್ದರು. ಶೂಮಾಕರ್ ತಲೆಗಾದ ತೀವ್ರ ಪೆಟ್ಟಿನಿಂದಾಗಿ ಅವರು ಕೋಮಾ ಸ್ಥಿತಿ ತಲುಪಿದ್ದರು. ಇತ್ತೀಚೆಗಷ್ಟೇ ಅವರು ಕೋಮಾದಿಂದ ಮರಳಿದ್ದು, ಇದೀಗ ಕಣ್ ಸನ್ನೆ ಮೂಲಕ ಮಾತನಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


