ಈಗಿನ ಸುದ್ದಿ

'ಕಾಮನ್ ವೆಲ್ತ್‌'ನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ

'ಕಾಮನ್ ವೆಲ್ತ್‌'ನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ
Published On :

ಗ್ಲಾಸ್ಗೋ: ಗ್ಲಾಸ್ಗೋನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಆಯೋಜಕರಿಂದ ಭಾರತ ರಾಷ್ಟ್ರಧ್ವಜಕ್ಕೆ ಅಪಮಾನವೆಸಗಲಾಗಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದ ಸ್ವಾಗತ ಹಾಡನ್ನು ಹಾಡುವಾಗ ಆಯೋಜಕರು ಭಾರತ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಪ್ರದರ್ಶಿಸುವ ಮೂಲಕ ಅಪಮಾನವೆಸಗಿದ್ದಾರೆ. ಆಯೋಜಕರ ಅಜಾಗರೂಕತೆಯಿಂದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಕ್ರೀಡಾಕೂಟದ ಸ್ವಾಗತ ಹಾಡಾದ 'ಲೆಟ್ಸ್ ಬಿಗಾನ್ ದಿ ಗೇಮ್‌' ಎಂಬ ಹಾಡನ್ನು ಹಾಡುವಾಗ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ರಾಷ್ಟ್ರಗಳ ರಾಷ್ಟ್ರಧ್ವಜವನ್ನು ಪ್ರದರ್ಶಿಸುವುದು ವಾಡಿಕೆಯಾಗಿದ್ದು, ಅದರಂತೆ ನಿನ್ನೆಯ ಉದ್ಘಾಟನಾ ಸಮಾರಂಭದಲ್ಲಿಯೂ ರಾಷ್ಟ್ರಧ್ವಜಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಆಯೋಜಕರು ಭಾರತ ದೇಶವನ್ನು ಪ್ರತಿನಿಧಿಸುವ ಧ್ವಜವನ್ನು ತಲೆಕೆಳಗಾಗಿ ಪ್ರದರ್ಶನ ಮಾಡುವ ಮೂಲಕ ಪ್ರಮಾದ ಎಸಗಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟವನ್ನು ಆಯೋಜಸುವಾಗ ಆಯೋಜಕರಿಗೆ ಆಯಾ ದೇಶದ ಬಗೆಗಿನ ಕನಿಷ್ಟ ಜ್ಞಾನವೂ ಇಲ್ಲದೇ ಹೋದರೆ ಆಗುವ ಪ್ರಮಾದಗಳಿಗೆ ಪ್ರಸಕ್ತ ಘಟನೆ ಉತ್ತಮ ಉದಾಹರಣೆಯಂತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.