ಈಗಿನ ಸುದ್ದಿ

ಆಂಡರ್‌ಸನ್ ಜೊತೆ ಜಟಾಪಟಿ: ರವೀಂದ್ರ ಜಡೇಜಾಗೆ ದಂಡ

ಆಂಡರ್‌ಸನ್ ಜೊತೆ ಜಟಾಪಟಿ: ರವೀಂದ್ರ ಜಡೇಜಾಗೆ ದಂಡ
Published On :

ಲಂಡನ್: ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ನಡೆದಿದ್ದ ಜಟಾಪಟಿಗೆ ಸಂಬಂಧಿಸಿದಂತೆ ಭಾರತ ತಂಡದ ಆಟಗಾರ ರವೀಂದ್ರ ಜಡೇಜಾ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ದಂಡವಿಧಿಸಿದೆ.

ಕಳೆದ ಜುಲೈ 10ರಂದು ಟ್ರೆಂಟ್‌ಬ್ರಿಡ್ಜ್ ಮೈದಾನದಲ್ಲಿ ನಡೆದಿದ್ದ ಮೊದಲ ಪಂದ್ಯದ ವೇಳೆ ರವೀಂದ್ರ ಜಡೇಜಾ ಮತ್ತು ಇಂಗ್ಲೆಂಡ್ ತಂಡದ ಆಟಗಾರ ಜೇಮ್ಸ್ ಆಂಡರ್ ಸನ್ ನಡುವೆ ಉಂಟಾಗಿದ್ದ ಜಗಳಕ್ಕೆ ಸಂಬಂಧಿಸಿದಂತೆ ಐಸಿಸಿ ಶಿಸ್ತು ಸಮಿತಿ ಇಂದು ವಿಚಾರಣೆ ನಡೆಸಿತು. ಈ ವೇಳೆ ಭಾರತ ತಂಡದ ಆಟಗಾರ ಐಸಿಸಿಯ ಲೆವೆಲ್1 ಶಿಸ್ತನ್ನು ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ರವೀಂದ್ರ ಜಡೇಜಾ ಅವರಿಗೆ ಐಸಿಸಿ ಪಂದ್ಯದ ಶೇ.50 ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದೆ.

ಅಲ್ಲದೆ ಇಂಗ್ಲೆಂಡ್ ತಂಡದ ಆಟಗಾರ ಜೇಮ್ಸ್ ಆಂಡರ್‌ಸನ್ ಅವರು ಕೂಡ ಐಸಿಸಿ ಶಿಸ್ತು ಪಟ್ಟಿಯ 2.1.8ನ್ನು ಉಲ್ಲಂಘಿಸಿದ್ದು, ಅವರ ವಿರುದ್ಧವೂ ಐಸಿಸಿ ಕ್ರಮಕ್ಕೆ ಮುಂದಾಗಿದೆ. ಐಸಿಸಿಯ ವಿಚಾರಣೆಯಲ್ಲಿ ಈ ಇಬ್ಬರು ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಮರೆತು ಪರಸ್ಪರ ಜಟಾಪಟಿಗೆ ಇಳಿದಿದ್ದರು ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಈ ಇಬ್ಬರು ಆಟಗಾರರಿಗೆ ಐಸಿಸಿ ಎಚ್ಚರಿಕೆ ನೀಡಿದೆ.

ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಆರಂಭವಾಗಿದ್ದ ಮೊದಲ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಮತ್ತು ಆಂಡರ್‌ಸನ್ ಅವರು ಮೈದಾನದಲ್ಲಿಯೇ ಪರಸ್ಪರ ಜಟಾಪಟಿಗೆ ಇಳಿದಿದ್ದರು. ಬಳಿಕ ವಿರಾಮದ ವೇಳೆ ಭಾರತೀಯ ಡ್ರೆಸಿಂಗ್ ಕೊಠಡಿಯತ್ತ ಆಗಮಿಸಿದ್ದ ಆಂಡರ್‌ಸನ್ ಅವರು ಜಡೇಜಾ ಅವರೊಂದಿಗೆ ತಳ್ಳಾಟ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ರವೀಂದ್ರ ಜಡೇಜಾ ಮತ್ತು ಭಾರತ ತಂಡದ ಮ್ಯಾನೇಜರ್ ಇಂಗ್ಲೆಂಡ್ ತಂಡದ ಆಟಗಾರನ ವಿರುದ್ಧ ಮ್ಯಾಚ್ ರೆಫರಿಗೆ ದೂರು ನೀಡಿದ್ದರು. ಇದು ಐಸಿಸಿ ಶಿಸ್ತು ಸಮಿತಿಗೆ ವರ್ಗಾವಣೆಯಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಐಸಿಸಿಯ ಶಿಸ್ತು ಸಮಿತಿ ಸದಸ್ಯರು ಪ್ರಕರಣದಲ್ಲಿ ಜಡೇಜಾ ಅವರ ಪಾತ್ರಕ್ಕೆ ಸಂಬಂಧಿಸಿದಂತೆ ಅವರಿಗೆ ದಂಡವಿಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.