ನಿಗದಿಯಾಗಿರುವ ಕನಿಷ್ಠ ಕೂಲಿ ಜಾರಿಗೆ ಸಿಐಟಿಯು ಆಗ್ರಹ
ಬೆಂಗಳೂರು: ಸರ್ಕಾರ ನಿಗದಿಗೊಳಿಸಿರುವ ಬೀಡಿ ಕಾರ್ಮಿಕರ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಆಗ್ರಹಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪ್ರಸನ್ನಕುಮಾರ್, 2012 ರಲ್ಲಿ ನಿಗದಿಗೊಳಿಸಿದ ಬೀಡಿ ಕಾರ್ಮಿಕರ ತುಟ್ಟಿಭತ್ಯೆ ಹೆಚ್ಚಳವನ್ನು ಬೀಡಿ ಮಾಲೀಕರು ಈ ವರೆಗೂ ಜಾರಿಮಾಡದೆ, ಬೀಡಿ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದರೂ ತಿಳಿದೂ ತಿಳಿಯದಂತೆ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
2014ರ ಬೆಲೆ ಏರಿಕೆ ಅನ್ವಯದ ಅಂಶದಂತೆ ಬೀಡಿ ಮಾಲೀಕರು ಪ್ರತಿ ಬೀಡಿಗೆ 3 ಪೈಸೆಯಂತೆ ಸಾವಿರ ಬೀಡಿ ಕೂಲಿಗೆ 21.15 ರುಪಾಯಿಯನ್ನು 10 ಲಕ್ಷ ಬೀಡಿ ಕಾರ್ಮಿಕರಿಗೆ ನೀಡಬೇಕು. ಆದರೆ ಕೂಲಿ ಹಣವನ್ನು ನೀಡದೆ, ತುಟಿಭತ್ಯೆ ವೆಚ್ಚವನ್ನು ಜಾರಿಗೊಳಿಸದೆ ಕೂಲಿ ಕಾರ್ಮಿಕರಿಗೆ ಸರ್ಕಾರ ವಂಚಿಸುತ್ತಿದೆ ಎಂದು ಅವರು ಆರೋಪಿಸಿದರು.
ಇನ್ನು ಮುಂದೆ ಬೀಡಿ ಮಾಲೀಕರಾಗಲೀ ಅಥವಾ ರಾಜ್ಯ ಸರ್ಕಾರವಾಗಲಿ ಈ ಬಗ್ಗೆ ಗಮನ ಹರಿಸದಿದ್ದರೆ, ಸಿಐಟಿಯು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಷನ್ ಜೊತೆಗೂಡಿ ರಾಜ್ಯಾದ್ಯಂತ ಆಗಸ್ಟ್ 12 ರಂದು ಬೀಡಿ ಫ್ಯಾಕ್ಟರಿಗಳ ಎದುರು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

