ಬಡರೋಗಿಗಳ ಸಹಾಯಕ್ಕಾಗಿ 'ರನ್ ಫಾರ್ ಎ ಬೀಟ್'
ಬೆಂಗಳೂರು: ಹೃದಯ ಸಂಬಂಧಿ ಖಾಯಿಲೆಗೆ ತುತ್ತಾದ ಬಡಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಉದ್ಯತಿ ಟ್ರಸ್ಟ್ 'ರನ್ ಫಾರ್ ಎ ಬೀಟ್' ಎಂಬ ಕಾರ್ಯಕ್ರಮವನ್ನು ಆಗಸ್ಟ್ 10ರಂದು ಹಮ್ಮಿಕೊಂಡಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉದ್ಯತಿ ಟ್ರಸ್ಟ್ ಸದಸ್ಯೆ ದಿವ್ಯ ಅವರು, ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚುತ್ತಿದ್ದು, ಬಡತನ ರೇಖೆಗಿಂತ ಕೆಳಗೆ ಇರುವ ಜನರು ಹೃದಯ ಸಂಬಂಧಿ ಖಾಯಿಲೆಯ ವೆಚ್ಚ ಭರಿಸಲು ಸಾಧ್ಯವಾಗದೆ ಸಾವನ್ನಪ್ಪುತ್ತಿದ್ದಾರೆ.
ಇಂತಹ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ನಮ್ಮ ಟ್ರಸ್ಟ್ ಆಗಸ್ಟ್ 10ರಂದು 'ರನ್ ಫಾರ್ ಎ ಬೀಟ್' ಎಂಬ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಗ್ಗೆ 6.30ಕ್ಕೆ ಜಯನಗರದ 5ನೇ ಬ್ಲಾಕ್ನಿಂದ ಸಾಕು ಪ್ರಾಣಿಗಳೊಂದಿಗೆ ಓಟ ಆರಂಭವಾಗಲಿದೆ. ಮಾಲೀಕರು ತಮ್ಮ ನೆಚ್ಚಿನ ಸಾಕು ಪ್ರಾಣಿಗಳೊಂದಿಗೆ ಓಟದಲ್ಲಿ ಭಾಗಿಯಾಗಲು ಇದೊಂದು ಉತ್ತಮ ವೇದಿಕೆಯಾಗಿದು, ಈ ಕಾರ್ಯಕ್ರಮದಿಂದ ಬಂದ ಹಣವನ್ನು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡರೋಗಿಗಳ ಚಿಕಿತ್ಸಾ ವೆಚ್ಚಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು 5 ಸಾವಿರದಿಂದ 10 ಸಾವಿರವನ್ನು ಪಾವತಿಸಿ, ಜುಲೈ 31ರೊಳಗೆ ಈ ಕೆಳಕಂಡ ವಿಳಾಸಕ್ಕೆ ಭೇಟಿ ನೀಡಿ ನೊಂದಣಿ ಮಾಡಿಕೊಳ್ಳಬೇಕು. ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಈ ಓಟದಲ್ಲಿ ವಿಶೇಷ ಅವಕಾಶ ನೀಡಲಾಗಿದೆ ಎಂದು ದಿವ್ಯಾ ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7760598121
ವೆಬ್ ವಿಳಾಸ: Www.runforabeat.com
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

