ಈಗಿನ ಸುದ್ದಿ

ಅತ್ಯಾಚಾರದ ವಿರುದ್ಧ ಶಾಲಾ ಮಕ್ಕಳಿಂದ ಪ್ರತಿಭಟನೆ

ಅತ್ಯಾಚಾರದ ವಿರುದ್ಧ ಶಾಲಾ ಮಕ್ಕಳಿಂದ ಪ್ರತಿಭಟನೆ
Published On :

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ವಿರುದ್ಧ ಗೋಪಾಲನ್ ರಾಷ್ಟ್ರೀಯ ಮತ್ತು ಗೋಪಾಲನ್ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಶನಿವಾರ ಧನಸಂಗ್ರಹ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಿದರು.

ಇಂದು ಮಧ್ಯಾಹ್ನ ಹಳೆ ಮದ್ರಾಸ್ ರಸ್ತೆಯಲ್ಲಿರುವ ಗೋಪಾಲನ್ ಸಿಗ್ನೇಚರ್ ಮಾಲ್ ಬಳಿ ವಿದ್ಯಾರ್ಥಿಗಳು ಮಹಿಳೆಯ ಮೇಲಿನ ಅತ್ಯಾಚಾರ ನಿಲ್ಲಬೇಕು ಎಂಬ ಫಲಕಗಳನ್ನು ಪ್ರದರ್ಶಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಹೆಚ್ಚಾಗಿ ಶಾಲಾ ಕಾಲೇಜು ಅಪ್ರಾಪ್ತ ಹುಡುಗಿಯರೇ ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಶಾಲಾ ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂಬುದೇ ವಿದ್ಯಾರ್ಥಿಗಳ ಅಳಲಾಗಿದೆ.

ನಗರದ ವಿಬ್‌ಗಯಾರ್ ಶಾಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ನಂತರ ಕೆಲವೊಂದು ಶಾಲೆಗಳು ಸೆಕ್ಯೂರಿಟಿಯನ್ನು ಒದಗಿಸಲು ಮುಂದಾಗಿವೆ. ಅದೇ ರೀತಿ ಗೋಪಾಲನ್ ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಶಾಲೆಗಳಲ್ಲಿ ಭದ್ರತೆ ಒದಗಿಸಿರುವುದಕ್ಕೆ ಪೋಷಕರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಶಾಲೆಯ ಪ್ರಿನ್ಸಿಪಾಲ್ ದೀಪ್ತಿ ಸಿಂಗ್ ಅವರು, ಶಾಲಾ ವಿದ್ಯಾರ್ಥಿಗಳ ರಕ್ಷಣೆಗಾಗಿ ಶಾಲಾ ವಿದ್ಯಾರ್ಥಿಗಳೇ ನಡೆಸಿದ ಪ್ರತಿಭಟನೆ ಇದಾಗಿದ್ದು, ಶಾಲಾ ಸಿಬ್ಬಂದಿ ಹಾಗೂ ಪೋಷಕರು ಕ್ಯಾಂಪಸ್‌ನ್ನು ಸುರಕ್ಷಿತ ಸ್ಥಳವನ್ನಾಗಿ ಮಾಡಬೇಕಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.