ಈಗಿನ ಸುದ್ದಿ

ನಿತೀಶ್ ಜತೆ ಕೈ ಜೋಡಿಸಿದ ಲಾಲೂ; ಬಿಜೆಪಿ ವಿರುದ್ಧ ಹೋರಾಟಕ್ಕೆ ರಣತಂತ್ರ

ನಿತೀಶ್ ಜತೆ ಕೈ ಜೋಡಿಸಿದ ಲಾಲೂ; ಬಿಜೆಪಿ ವಿರುದ್ಧ ಹೋರಾಟಕ್ಕೆ ರಣತಂತ್ರ
Published On :

ನವದೆಹಲಿ: ದಶಕಗಳಿಂದ ಪ್ರತಿಸ್ಪರ್ಧಿಗಳಾಗಿದ್ದ ಎರಡು ಪಕ್ಷಗಳೀಗ ಬಿಹಾರದಲ್ಲಿ ಬಿಜೆಪಿಯನ್ನು ಪರಾಭವಗೊಳಿಸುವುದಕ್ಕಾಗಿ ಒಂದಾಗಿವೆ.

ಬಿಹಾರದ ವಿಧಾನಸಭಾ ಉಪಚುನಾವಣೆಗಾಗಿ ಬಿಹಾರದ ರಾಜಕೀಯ ದಿಗ್ಗಜರೆನಿಸಿಕೊಂಡಿರುವ ನಿತೀಶ್ ಕುಮಾರ್ ಇದೀಗ ಲಾಲೂ ಪ್ರಸಾದ್ ಯಾದವ್ ಜತೆ ಕೈಜೋಡಿಸಿದ್ದಾರೆ .

ಆಗಸ್ಟ್ 21ರಂದು ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗಾಗಿ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಿಬ್ಬರೂ ಜತೆಯಾಗಿ ಬಿಜೆಪಿ ವಿರುದ್ಧ ರಣತಂತ್ರ ಹೂಡಲಿದ್ದಾರೆ.

ಈ ಮೂಲಕ ನಿತೀಶ್ ಕುಮಾರ್ ಅವರ ಜನಾತಾ ದಳ (ಸಂಯುಕ್ತ) ಪಕ್ಷ ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಜತೆಗೆ ಕೈಜೋಡಿಸಿದೆ.

ಪ್ರಸ್ತುತ ಚುನಾವಣೆಯಲ್ಲಿ ಆರ್‌ಜೆಡಿ ಮತ್ತು ಜನತಾದಳ ತಲಾ ನಾಲ್ಕು ಸೀಟುಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ 2 ಸೀಟುಗಳಲ್ಲಿ ಸ್ಪರ್ಧಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.