ಸಹರಾನ್ಪುರ ಘರ್ಷಣೆ: 4 ಗಂಟೆ ಕಾಲ ಕರ್ಫ್ಯೂ ಸಡಿಲಿಕೆ

ಸಹರಾನ್ಪುರ: ಪಶ್ಚಿಮ ಉತ್ತರಪ್ರದೇಶದ ವಿವಾದಿತ ಜಾಗದಲ್ಲಿ ಗುರುದ್ವಾರ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವಿನ ಘರ್ಷಣೆ ಬೂದಿ ಮುಚ್ಚಿದ ಕೆಂಡದಂತಿದ್ದರು ಜಿಲ್ಲಾಡಳಿತ ಸೋಮವಾರ 4 ಗಂಟೆಗಳ ಕಾಲ ಕರ್ಫ್ಯೂವನ್ನು ಸಡಿಲಿಸಿದೆ.
ಸಾರ್ವಜನಿಕರಿಗೆ ಅನುಕೂಲವಾಗಲೆಂದು ಜಿಲ್ಲಾಡಳಿತ ಕೆಳ ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ ಮಾಡಿದೆ. ನೂತನ ನಗರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ 2 ಗಂಟೆಯವರೆಗೂ ಹಾಗೂ ಹಳೆಯ ನಗರಗಳಲ್ಲಿ 3 ಗಂಟೆಯಿಂದ 7 ಗಂಟೆಯವರೆಗೂ ನಿರ್ಭಿತ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದರಿಂದಾಗಿ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಜನರಿಗೆ ಅನುಕೂಲವಾಗಲಿದೆ. ಈ ವೇಳೆ ಪರಿಸ್ಥಿತಿಯನ್ನು ಅವಲೋಕಿಸಿ ಕರ್ಫ್ಯೂವನ್ನು ಹಂತ ಹಂತವಾಗಿ ಸಡಿಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಧ್ಯಾ ತಿವಾರಿ ಹೇಳಿದ್ದಾರೆ.
ಕರ್ಫ್ಯೂ ಸಡಿಲಿಕೆ ವೇಳೆ ಗಲಭೆ ಪೀಡಿತ ಪ್ರದೇಶದಗಳಲ್ಲಿ ಹೆಚ್ಚಿನ ಸಮಸ್ಯೆಗಳು ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳು ಸಾಕಷ್ಟು ಸಂಖ್ಯೆಯಲ್ಲಿ ಗಸ್ತು ತಿರುಗುತ್ತಿದ್ದಾರೆ. ಪಿಎಪಿಯ 8. ಸಿಆರ್ಎಫ್ಎನ್ 6 ಆರ್ಎಎಫ್ಎನ್ 2 ಮತ್ತು ಐಟಿಬಿಪಿಯ ಎರಡು ತುಕಡಿಗಳು ಸೇರಿದಂತೆ ಹೆಚ್ಚುವರಿ ರಕ್ಷಣಾ ಪಡೆಗಳ ಒಟ್ಟು 18 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದರು.
ನಿನ್ನೆ ನಡೆದ ಘರ್ಷಣೆಯಲ್ಲಿ ಕೆಲವು ಕಡೆ ಕಲ್ಲು ತೂರಾಟ ಹಾಗೂ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಒಟ್ಟಾರೆಯಾಗಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಸಹರಾನ್ಪುರದಲ್ಲಿ ಸುಮಾರು 38 ಮಂದಿಯನ್ನು ಬಂಧಿಸಲಾಗಿದೆ.
ವಿವಾದಿತ ಪ್ರದೇಶದಲ್ಲಿ ಸಿಖ್ ಸಮುದಾಯದವರು ಗುರುದ್ವಾರ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಇದನ್ನು ಮುಸ್ಲಿಂ ಸಮುದಾಯ ವಿರೋಧಿಸಿತು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಮೂವರು ಮೃತಪಟ್ಟಿದ್ದು, ಸುಮಾರು 24 ಮಂದಿಗೆ ತೀವ್ರ ಗಾಯಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


