ಯುಪಿಎಸ್ಸಿ: ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಸರ್ಕಾರ ಅಭಯ

ನವದೆಹಲಿ: ಕೇಂದ್ರ ನಾಗರಿಕ ಸೇವಾ ಆಯೋಗದ ನೂತನ ಪರೀಕ್ಷಾ ಕ್ರಮವನ್ನು ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ಒಂದು ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ಪ್ರಧಾನಿಯವರ ಕಚೇರಿಯಲ್ಲಿ ರಾಜ್ಯ ಸಚಿವ ಜಿತೇಂದರ್ ಸಿಂಗ್ ಅವರ ಜತೆ ಮಾತನಾಡಿದ ರಾಜ್ನಾಥ್ ಸಿಂಗ್ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ಅಭ್ಯರ್ಥಿಗಳಿಗೆ ಅಭಯ ನೀಡಿದ್ದಾರೆ.
2014ರ ಸಿವಿಲ್ ಸರ್ವೀಸ್ ಪ್ರಾಥಮಿಕ ಪರೀಕ್ಷೆ ಆಗಸ್ಟ್ 24ಕ್ಕೆ ಆರಂಭವಾಗುವುದಾಗಿ ನಿಗದಿಯಾಗಿತ್ತು. ಆದರೆ ಅಭ್ಯರ್ಥಿಗಳು ನೂತನ ಪರೀಕ್ಷಾ ಕ್ರಮದಲ್ಲಿ ತಿದ್ದುಪಡಿ ತರಬೇಕೆಂದು ಒತ್ತಾಯಿಸಿರುವುದರಿಂದ ಪರೀಕ್ಷೆ ದಿನಾಂಕ ಮುಂದೂಡಲ್ಪಡುವ ಸಾಧ್ಯತೆ ಹೆಚ್ಚಾಗಿದೆ.
ಯುಪಿಎಸ್ಸಿ ನೂತನಪರೀಕ್ಷಾ ಕ್ರಮದಿಂದ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯರಲ್ಲದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿರುವುದರಿಂದ ಆ ಪಠ್ಯಕ್ರಮವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಅಭ್ಯರ್ಥಿಗಳು ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಾ ಇದ್ದಾರೆ.
ಸೋಮವಾರ ಯುಪಿಎಸ್ಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅಭ್ಯರ್ಥಿಗಳು ನೋಂದಣಿ ಪತ್ರವನ್ನು ಸುಟ್ಟು ಹಾಕಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


