ಈಗಿನ ಸುದ್ದಿ

ದೇಶಾದ್ಯಂತ ಸಂಭ್ರಮದ ಈದ್ ಆಚರಣೆ

ದೇಶಾದ್ಯಂತ ಸಂಭ್ರಮದ ಈದ್ ಆಚರಣೆ
Published On :

ನವದೆಹಲಿ: ಮುಸ್ಲಿಮರ ಪವಿತ್ರ ರಂಜಾನ್ ಮಾಸಾಚರಣೆಯ ನಂತರ ಇಂದು ದೇಶಾದ್ಯಂತ ಈದ್ ಉಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಮಂಗಳವಾರ ಬೆಳಗ್ಗೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇಶದ ಕೆಲವೊಂದು ಪ್ರದೇಶಗಳಲ್ಲಿ ಸೋಮವಾರ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರ ಈದ್ ಆಚರಣೆ ಮಾಡಲಾಗುತ್ತಿದೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಎಲ್ಲರಿಗೂ ಈದ್ ಹಬ್ಬದ ಶುಭ ಹಾರೈಕೆ ನೀಡಿದ್ದು, ದೇಶದ ಜನರಲ್ಲಿ ಏಕತೆ, ಸಹೋದರತ್ವ, ಶಾಂತಿ ನೆಲೆಸಲಿ ಎಂದು ಪ್ರಧಾನಿ ಮೋದಿ ಟ್ವೀಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ಈ ಶುಭ ದಿನ ಎಲ್ಲರಿಗೂ ಶಾಂತಿ, ಸಂತೋಷ ಹಾಗು ದೇಶಕ್ಕೆ ಅಭಿವೃದ್ಧಿಯನ್ನು ತರುವಂತಾಗಲಿ ಎಂದು ಗೃಹ ಸಚಿವ ರಾಜ್‌ನಾಥ್ ಸಿಂಗ್ ತಮ್ಮ ಫೇಸ್‌ಬುಕ್‌ನಲ್ಲಿ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.