ವಿಧಾನಸಭಾ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಸಜ್ಜಾಗಿದ್ದು ತನ್ನ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಮಂಗಳವಾರ ಘೋಷಿಸಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮೂರು ವಿಧಾನಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬಳ್ಳಾರಿ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರು ಇಂದು ಘೋಷಿಸಿದ್ದಾರೆ.
ಅದರಂತೆ ಚಿಕ್ಕೋಡಿ ಕ್ಷೇತ್ರದಿಂದ-ಮಹಾಂತೇಶ ಕವಟಗಿಮಠ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಓಬಳೇಶ್, ಶಿಕಾರಿಪುರ ಕ್ಷೇತ್ರದಿಂದ ಮಾಜಿ ಸಂಸದ ಬಿ.ವೈ. ರಾಘವೇಂದ್ರ ಅವರು ಸ್ಪರ್ಧಿಸುತ್ತಿದ್ದಾರೆ.
ಕರ್ನಾಟಕದಲ್ಲಿ 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದ ಮೂವರು ಶಾಸಕರು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದರು.
ಶಿವಮೊಗ್ಗದಲ್ಲಿ ಗೆಲುವು ದಾಖಲಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಬಿ.ಶ್ರೀರಾಮುಲು ಅವರ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಮತ್ತು ಚಿಕ್ಕೋಡಿ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸಚಿವ ಪ್ರಕಾಶ್ ಹುಕ್ಕೇರಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.
ಮೂರು ಕ್ಷೇತ್ರಗಳಲ್ಲಿ ಅಗಸ್ಟ್ 21 ರಂದು ಮತದಾನ ನಡೆಯಲಿದ್ದು, ಅಗಸ್ಟ್ 25 ರಂದು ಫಲಿತಾಂಶ ಹೊರಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


