ಈಗಿನ ಸುದ್ದಿ

ನಾಳೆ ಬೆಂಗಳೂರು ಬಂದ್: ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ

ನಾಳೆ ಬೆಂಗಳೂರು ಬಂದ್: ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ
Published On :

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಎಂಇಎಸ್ ಪುಂಡಾಟಿಕೆ  ವಿರುದ್ದ ಬೆಂಗಳೂರು ಬಂದ್​’ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ಕೆಲ ಸಂಘಟನೆಗಳು ಬಂದ್​’ಗೆ ಕೈಜೋಡಿಸಿದರೆ, ಇನ್ನು ಕೆಲ ಸಂಘಟನೆಗಳು ನಿರ್ಲಿಪ್ತವಾಗಿವೆ.

ರಾಜ್ಯದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೆ ಇತ್ತೀಚೆಗೆ ಎಂಇಎಸ್ ಪುಂಡಾಟಿಕೆ ಕೂಡ ಹೆಚ್ಚಾಗಿದೆ. ಇವೆಲ್ಲವನ್ನು ವಿರೋಧಿಸಿ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ನಾಳೆ ಬೆಂಗಳೂರು ಬಂದ್’​ಗೆ ಕರೆ ನೀಡಲಾಗಿದೆ. ಹಲವು ಕನ್ನಡಪರ ಸಂಘಟನೆಗಳು ಈ ಬಂದ್’​ಗೆ ಬೆಂಬಲ ಸೂಚಿಸಿವೆ. ಸುಮಾರು 70ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಕೈಜೋಡಿಸಿವೆ.

ಇದೇ ವೇಳೆ, ಕೆ.ಎಸ್.ಆರ್.​ಟಿ.ಸಿ, ಬಿಎಂಟಿಸಿ, ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸವಾಗುವುದಿಲ್ಲ, ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬ್ಯುಲೆನ್ಸ್ ಕಾರ್ಯ ನಿರ್ವಹಿಸಲಿವೆ. ಇನ್ನು ಅಗತ್ಯ ವಸ್ತುಗಳಾದ ಹಾಲು, ಪೇಪರ್, ತರಕಾರಿಗೆ ಯಾವುದೇ ಅಡಚಣೆ ಉಂಟಾಗುವುದಿಲ್ಲ. ಹಾಗೇ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ನಗರದ ಜಿಲ್ಲಾಧಿಕಾರಿ ಹೇಳಿದ್ದಾರೆ.

ನಾಳೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬೆಂಗಳೂರು ಬಂದ್ ಆಗಲಿದೆ. ಆಟೋ ಸಂಘಟನೆಗಳೂ ಬಂದ್‌ಗೆ ಬೆಂಬಲ ಸೂಚಿಸಿಲ್ಲ. ಆದರೆ ನಗರದ ಶಾಪಿಂಗ್ ಮಾಲ್‌ಗಳು ಬಂದ್‌ಗೆ ಬೆಂಬಲ ನೀಡಿವೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.