ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಬೆಂಬಲ ಇಲ್ಲ: ಶಿವರಾಮೇಗೌಡ

ಬೆಂಗಳೂರು: ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಾಳೆ ನಡೆಯಲಿರುವ ಬೆಂಗಳೂರು ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದೆ.
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರವನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡುವುದಿಲ್ಲ ಎಂದು ಜಂಟಿ ಸಮಿತಿ ಅಧ್ಯಕ್ಷ ಶಿವರಾಮೇಗೌಡ ಹೇಳಿದ್ದಾರೆ.
ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯವನ್ನು ನಾವು ವಿರೋಧಿಸುತ್ತೇವೆ. ಅದೆ ರೀತಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಆದರೆ ಇದಕ್ಕೆಲ್ಲ ಬಂದ್ ಮಾಡುವ ಅಗತ್ಯವಿಲ್ಲ ಎಂದು ಶಿವರಾಮೇಗೌಡ ತಿಳಿಸಿದ್ದಾರೆ.
ನಮಗೆ ನಮ್ಮದೇ ಆದ ಕಟ್ಟುಪಾಡುಗಳಿರುತ್ತವೆ ಅವುಗಳನ್ನು ಆಲೋಚಿಸಬೇಕು. ಹೀಗಾಗಿ ಬಂದ್ ಆಚರಣೆಗೆ ನಮ್ಮ ಖಾಸಗೀ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡುವುದಿಲ್ಲ. ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ರಾಜ್ಯ ಕನ್ನಡ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಜು. 31ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


