ಈಗಿನ ಸುದ್ದಿ

ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ನಾಳೆ 'ಯಳ್ಳೂರು ಚಲೋ'

ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ನಾಳೆ 'ಯಳ್ಳೂರು ಚಲೋ'
Published On :

ಬೆಂಗಳೂರು: ಕರ್ನಾಟಕದಲ್ಲಿ ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಖಂಡಿಸಿ ನಾಳೆ 'ಯಳ್ಳೂರು ಚಲೋ' ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಗುರುವಾರ ಹೇಳಿದ್ದಾರೆ.

ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಎಂಇಎಸ್ ಪುಂಡಾಟಿಕೆ ಖಂಡಿಸಿ ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳು, ಇಂದು ವಾಟಾಳ್ ನೇತೃತ್ವದಲ್ಲಿ ನಗರದ ಟೌನ್‌ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಈ ವೇಳೆ ಮತನಾಡಿದ ವಾಟಾಳ್ ನಾಗರಾಜ್ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರಗಳನ್ನು ಮತ್ತು ಯಳ್ಳೂರಿನಲ್ಲಿ ಎಂಇಎಸ್ ಕಾರ್ಯಕರ್ತರ ನಡೆಸಿದ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸಿದರು. ಅಲ್ಲದೆ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ನಾಳೆ 'ಯಳ್ಳೂರು ಚಲೋ' ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಎಂಇಎಸ್ ಹಾಗೂ ಶಿವಸೇನೆಯನ್ನು ನಿಷೇಧಿಸಬೇಕು ಮತ್ತು ಗಡಿಯಲ್ಲಿ ಶಾಂತಿ ಕದಡುತ್ತಿರುವ ಎಂಇಎಸ್ ಕಾರ್ಯಕರ್ತರನ್ನು ಈ ಕೂಡಲೇ ಬಂಧಿಸಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.