ಈಗಿನ ಸುದ್ದಿ

ಬೆಂಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Published On :

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಸಹಜವಾಗಿದೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್, ಆಟೋ ಹಾಗೂ ರೈಲು ಸಂಚಾರದಲ್ಲಿ ಯಾವುದೇ ವತ್ಯಯ ಉಂಟಾಗಿಲ್ಲ. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಶೇ.10ರಷ್ಟು ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕೆಲ ಖಾಸಗಿ ಶಾಲೆ, ಕಾಲೇಜುಗಳು ರಜೆ ಘೋಷಿಸಿದ್ದು, ಆರ್‌ಎಂಸಿ ಯಾರ್ಡ್, ನಗರದ ಮಾಲ್‌ಗಳು, ಚಿತ್ರ ಮಂದಿರಗಳು, ಖಾಸಗಿ ಶಾಲೆಗಳು, ಹೋಟೆಲ್ ಮಾಲೀಕರು, ಸರ್ಕಾರಿ ನೌಕರರ ಸಂಘಟನೆ, ಖಾಸಗಿ ವಾಹನ ಮಾಲೀಕರ ಕೆಲ ಸಂಘಟನೆಗಳು ಹಾಗೂ ಬೆಂಗಳೂರು ಜ್ಯುವೆಲ್ಲರ್ಸ್ ಮಾಲೀಕರ ಸಂಘ ಮತ್ತು ಗಾರ್ಮೆಂಟ್ಸ್ ಕಂಪನಿಗಳು ಸಹ ಬಂದ್‌ಗೆ ಬೆಂಬಲ ಸೂಚಿಸಿ ರಜೆ ಘೋಷಣೆ ಮಾಡಿವೆ.

ಕರವೇ ಕಾರ್ಯಕರ್ತರು ಕೆಲವು ಕಡೆ ಅಂಗಡಿ ಮುಂಗಟ್ಟಗಳನ್ನು ಬಲವಂತವಾಗಿ ಬಂದ್ ಮಾಡುತ್ತಿರುವುದನ್ನು ಹೊರತುಪಡಿಸಿ ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.

ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳು ಕನ್ನಡ ಚಳವಳಿ ವಾಟಾಳ ಪಕ್ಷದ ಅಧ್ಯಕ್ಷ ವಾಟಾಳ ನಾಗರಾಜ್ ಅವರ ನೇತೃತ್ವದಲ್ಲಿ ನಗರದ ಟೌನ್‌ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.