ಲೋಕಸಭೆಯಲ್ಲಿ ಖರ್ಗೆಗೆ ಕಾಂಗ್ರೆಸ್ ನಾಯಕನ ಪಟ್ಟ

ನವದೆಹಲಿ: ಸಂಸತ್ನಲ್ಲಿ ರಾಹುಲ್ ಗಾಂಧಿಗೆ ನಾಯಕತ್ವ ಪಟ್ಟ ನೀಡಬೇಕೆಂಬ ಒತ್ತಾಯವನ್ನು ತಳ್ಳಿ ಇದೀಗ ಕಾಂಗ್ರೆಸ್ ಮಾಜಿ ರೇಲ್ವೇ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಲೋಕಸಭೆಯ ವಿಪಕ್ಷ ನಾಯಕರನ್ನಾಗಿ ಘೋಷಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕನ ಪಟ್ಟವನ್ನು ನೀಡಲಾಗಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಹೇಳಿದ್ದಾರೆ.
ಈ ಹಿಂದೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡಬೇಕೆಂದು ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ ) ಒತ್ತಾಯಿಸಿತ್ತು. ಆದರೆ ಇದೀಗ ಕಾಂಗ್ರೆಸ್ ಹಿರಿಯ ನಾಯಕ ಗುಲ್ಬರ್ಗಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾಯಕರನ್ನಾಗಿ ಘೋಷಣೆ ಮಾಡುವ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದೆ.
ಲೋಕಸಭಾ ಸದಸ್ಯರ ಒಟ್ಟು ಸಂಖ್ಯೆ 543 ಆಗಿದ್ದು, ಇಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರಬೇಕಾದರೆ ಪಕ್ಷವೊಂದು ಕನಿಷ್ಟ 55 ಸೀಟುಗಳನ್ನು ಹೊಂದಿರಬೇಕು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಲಭಿಸಿರುವ ಸೀಟುಗಳ ಸಂಖ್ಯೆ ಕೇವಲ 44. ಆದ್ದರಿಂದ ಲೋಕಸಭೆಯಲ್ಲಿ ಖರ್ಗೆ ಅವರನ್ನು ತಮ್ಮ ನಾಯಕನ್ನಾಗಿ ಘೋಷಿಸಿದರೂ, ಖರ್ಗೆ ಅವರು ವಿಪಕ್ಷ ನೇತಾರರಾಗುತ್ತಾರೆಯೇ ಎಂಬುದು ಇನ್ನೂ ನಿರ್ಧಾರವಾದಂತಿಲ್ಲ.
ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಸಂಸದರಾಗಿರುವ 70ರ ಹರೆಯದ ಖರ್ಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ಮುಖಂಡರಾಗಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಒಂಬತ್ತು ಸೀಟುಗಳಲ್ಲಿ ಗುಲ್ಬರ್ಗಾ ಕ್ಷೇತ್ರವೂ ಒಂದಾಗಿದ್ದು, ರಾಜ್ಯದಿಂದ 28 ಸದಸ್ಯರು ಪಾರ್ಲಿಮೆಂಟ್ನ ಕೆಳಮನೆಗೆ ಆಯ್ಕೆಯಾಗಿದ್ದರು.
543 ಸದಸ್ಯರಿರುವ ಸಂಸತ್ನಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 336 ಸೀಟುಗಳನ್ನು ಗಳಿಸಿಕೊಂಡಿವೆ. 282 ಸೀಟುಗಳನ್ನು ಗಿಟ್ಟಿಸಿಕೊಳ್ಳುವ ಮೂಲಕ ಬಿಜೆಪಿ ಬಹುಮತ ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


