ಈಗಿನ ಸುದ್ದಿ

ಅಗತ್ಯ ಬಿದ್ದರೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬೆಂಬಲ: ಸಿಎಂ ಜಯಾಲಲಿತಾ

ಅಗತ್ಯ ಬಿದ್ದರೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬೆಂಬಲ: ಸಿಎಂ ಜಯಾಲಲಿತಾ
Published On :

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಎನ್‌ಡಿಎಗೆ ನಮ್ಮ ಬೆಂಬಲದ ಅವಶ್ಯಕತೆ ಇಲ್ಲ, ಆದರೂ ರಾಜ್ಯಸಭೆಯಲ್ಲಿ ನಮ್ಮ ಬೆಂಬಲದ ಅವಶ್ಯಕತೆ ಬಿದ್ದರೆ ಅಗತ್ಯವಾಗಿ ಬೆಂಬಲಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರು ಮಂಗಳವಾರ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿದ್ದ ಜಯಾಲಲಿತಾ ಇದೇ ಮೊದಲ ಬಾರಿಗೆ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಎನ್‌ಡಿಎಗೆ ನಮ್ಮ ಬೆಂಬಲದ ಅವಶ್ಯಕತೆ ಇಲ್ಲ ಆದರೆ ರಾಜ್ಯಸಭೆಯಲ್ಲಿ ನಮ್ಮ ಬೆಂಬಲದ ಅವಶ್ಯಕತೆ ಬಿದ್ದರೆ ಅಗತ್ಯವಾಗಿ ಎನ್‌ಡಿಎಗೆ ಬೆಂಬಲ ಕೊಡಲು ಸಿದ್ದರಿದ್ದೇವೆ ಎಂದರು.

ಮೋದಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಯಾ, ರಾಜ್ಯಕ್ಕೆ ಸಂಬಂಧಿಸಿದಂತೆ ಯಾವುದೇ ವಿಶೇಷ ಪ್ಯಾಕೇಜ್ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆಯಿಟ್ಟಿಲ್ಲ. ಆದರೆ ಕಾವೇರಿ ನದಿ ನೀರು ವಿಚಾರವಾಗಿ ಪ್ರಧಾನಮಂತ್ರಿಗಳ ಜತೆ ಚರ್ಚಿಸಲಾಗಿದ್ದು, ಪ್ರಸಕ್ತ ವರ್ಷ ನಮಗೆ ಸೇರಬೇಕಾದ ನೀರನ್ನು ನ್ಯಾಯಸಮ್ಮತವಾಗಿ ನಮಗೆ ಸಿಗುವಂತೆ ಮಾಡಬೇಕು ಎಂದು ಪ್ರಧಾನಿಗೆ ಮನವಿ ಮಾಡಿದ್ದು, ನಮ್ಮ ಎಲ್ಲ ಮನವಿಗಳಿಗೆ ಪ್ರಾಧಾನ್ಯತೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಆಡಳಿತ ಮಂಡಳಿಗೆ ಹೆಚ್ಚು ಒತ್ತು ನೀಡಲು ಮನವಿ ಮಾಡಲಾಗಿದ್ದು, ಮುಲ್ಲಾಪೆರಿಯರ್ ಡ್ಯಾಂಗೆ ಸಂಬಂಧಪಟ್ಟ ದಾಖಲೆಗಳನ್ನು ಪ್ರಧಾನಿಯವರಿಗೆ ಸಲ್ಲಿಸಿದ್ದೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.