ಬಿಜೆಪಿ ನಾಯಕ ಯಶ್ವಂತ್ ಸಿನ್ಹಾಗೆ 14 ದಿನ ನ್ಯಾಯಾಂಗ ಬಂಧನ

ಜಾರ್ಖಂಡ್: ಜಾರ್ಖಂಡ್ ರಾಜ್ಯ ವಿದ್ಯುತ್ ಮಂಡಳಿ ಅಧಿಕಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಹಾಗೂ ಬಿಜೆಪಿ ಕಾರ್ಯಕರ್ತರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಸ್ಥಳೀಯ ಕೋರ್ಟ್ ಆದೇಶಿಸಿದೆ.
ಮಂಡಳಿಯ ಪ್ರಧಾನ ವ್ಯವಸ್ಥಾಪಕ ದನೇಶ್ ಝಾ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಲು ನಿರಾಕರಿಸಿದ ಯಶ್ವಂತ್ ಸಿನ್ಹಾ ಸೇರಿದಂತೆ 54 ಮಂದಿ ಕಾರ್ಯಕರ್ತರನ್ನು ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರಾದ ಆರ್.ಬಿ ಪಾಲ್ ಅವರು ಆದೇಶಿಸಿದ್ದಾರೆ.
ರಾಜ್ಯದಲ್ಲಿ ಉಲ್ಬಣಿಸಿರುವ ವಿದ್ಯುತ್ ಬಿಕ್ಕಟ್ಟು ಸಮಸ್ಯೆ ಸಂಬಂಧ ನಿನ್ನೆ ಜಾರ್ಖಂಡ್ನ ಹಝಾರಿಬಾಗ್ ಬ್ರಾಂಚ್ಗೆ ಬೀಗ ಜಡಿದು ಯಶ್ವಂತ್ ಸಿನ್ಹಾ ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಮಂಡಳಿಯ ಪ್ರಧಾನ ವ್ಯವಸ್ಥಾಪಕ ದನೇಶ್ ಝಾ ಅವರ ಕೈಗಳನ್ನು ಕಟ್ಟಿಹಾಕಿ ಎಂದು ಮಾಧ್ಯಮಗಳ ಮುಂದೆಯೇ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು. ಈ ಸೂಚನೆಯೊಂದಿಗೆ ಮಹಿಳಾ ಕಾರ್ಯಕರ್ತರು ಝಾ ಅವರು ಕೈಗಳನ್ನು ಬಂಧಿಸಿದ್ದರು.
ಪೊಲೀಸ್ ಮೂಲಗಳ ಪ್ರಕಾರ, ನಿನ್ನೆ ಸಿನ್ಹಾ ಅವರು ಸುಮಾರು 50 ಮಂದಿ ಮಹಿಳಾ ಕಾರ್ಯಕರ್ತರು ಸೇರಿ 300 ಬಿಜೆಪಿ ಕಾರ್ಯಕರ್ತರೊಂದಿಗೆ ಜಾರ್ಖಂಡ್ನ ಹಝಾರಿಬಾಗ್ ಯೂನಿಟ್ ಬಳಿ ಸುಮಾರು 9 ಗಂಟೆ ಸುಮಾರಿನಲ್ಲಿ ಮಂಡಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದರು ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡಳಿಯ ಪ್ರಧಾನ ವ್ಯವಸ್ಥಾಪಕ ದನೇಶ್ ಝಾ ಅವರು ಜಾರ್ಖಂಡ್ ಪೊಲೀಸ್ ಠಾಣೆಯಲ್ಲಿ ನನಗೆ ಅವಮಾನ ಮಾಡಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಸಿನ್ಹಾರನ್ನು ಬಂಧಿಸಲಾಗಿತ್ತು ಎಂದು ಡಿಎಸ್ಪಿ ಅರವಿಂದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


