ಗೋಪಿನಾಥ್ ಮುಂಡೆಗೆ ಸಂಸತ್ ಶ್ರದ್ಧಾಂಜಲಿ

ನವದೆಹಲಿ: ನಿನ್ನೆ ಕಾರು ಅಪಘಾತದಲ್ಲಿ ಮೃತಪಟ್ಟ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗೋಪಿನಾಥ್ ಮುಂಡೆ ಅವರಿಗೆ ಇಂದು ಲೋಕಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, 16ನೇ ಲೋಕಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಎಲ್ಲಾ ಸಂಸದರು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೋಪಿನಾಥ್ ಮುಂಡೆ ಸಾವಿಗೆ ಸಂತಾಪ ಸೂಚಿಸಿದರು. ಬಳಿಕ ಹಂಗಾಮಿ ಸ್ಪೀಕರ್ ಕಮಲ್ ನಾಥ್ ಅವರು ಸದನವನ್ನು ನಾಳೆ 11ಕ್ಕೆ ಮುಂದೂಡಿದರು.
ಇದಕ್ಕು ಮುನ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದ ಕಮಲ್ ನಾಥ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು.
ಮಧ್ಯಾಹ್ನ 2ಕ್ಕೆ ಮುಂಡೆ ಅಂತ್ಯಸಂಸ್ಕಾರ
ಇಂದು ಮಧ್ಯಾಹ್ನ 2 ಗಂಟೆಗೆ ಗೋಪಿನಾಥ್ ಮುಂಡೆ ಅವರ ಸ್ವಗ್ರಾಮ ಬೀಡ್ ಜಿಲ್ಲೆಯ ಪರ್ಲಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಅಂತ್ಯಸಂಸ್ಕಾರದಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


