ಪ್ರಧಾನಿ ಮೋದಿಗೆ ಸಿಎಂ ಸಿದ್ದು ಶುಭಾಶಯ

ನವದೆಹಲಿ: ಹೈಕಮಾಂಡ್ ಒತ್ತಡಕ್ಕೆ ಮಣಿದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೋದಿ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದ್ದಾರೆ.
ನವದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು ಶುಭಾಶಯ ತಿಳಿಸಿದ್ದು, ಈ ವೇಳೆ ಮೋದಿ ಅವರೊಂದಿಗೆ ಪ್ರಮುಖ ಎರಡು ವಿಚಾರಗಳ ಕುರಿತು ಪ್ರಸ್ತಾಪಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಭಾಷಾ ಮಾಧ್ಯಮದ ವಿವಾದ ಹಾಗೂ ಕಾವೇರಿ ನದಿ ನೀರು ವಿವಾದ ಕುರಿತಾಗಿ ಪ್ರಧಾನಿಯೊಂದಿಗೆ ಪ್ರಸ್ತಾಪಿಸಿದ್ದೇನೆ. ಕಾವೇರಿ ನದಿ ನೀರು ವಿವಾದ ಸುಪ್ರೀಂಕೋರ್ಟ್ನಲ್ಲಿರುವುದರಿಂದ ಕಾವೇರಿ ನಿರ್ವಹಣಾ ಮಂಡಳಿಯ ರಚನೆ ಮಾಡುವುದು ಬೇಡ ಎಂದು ಮನವಿ ಮಾಡಿದ್ದೇನೆ ಎಂದರು.
ಭಾರತ ಬಹು ಭಾಷಾ ರಾಷ್ಟ್ರವಾಗಿದ್ದು, ಇಲ್ಲಿ ಪ್ರಾದೇಶಿಕ ಭಾಷೆಗಳು ಉಳಿಯಬೇಕು. ಇದಕ್ಕೆ ಬೆಂಬಲಿಸುವಂತೆ ಈಗಾಗಲೇ ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಈ ಸಂಬಂಧ ಗಮನ ಹರಿಸುವಂತೆ ಪ್ರಧಾನಿಯನ್ನು ಕೋರಲಾಗಿದ್ದು, ಎರಡು ವಿಚಾರಗಳ ಕುರಿತಾಗಿ ಗಮನ ಹರಿಸುವುದಾಗಿ ಪ್ರಧಾನಿಗಳು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದಕ್ಕೂ ಮುನ್ನ, ಕೇಂದ್ರ ರೇಲ್ವೆ ಸಚಿವ ಡಿ.ವಿ ಸದನಂದಾಗೌಡ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ರಾಜ್ಯದ ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಭರಿಸುವ ಹಣದ ಬಗ್ಗೆ ಪ್ರಸ್ತಾಪಿಸಿ ನಮ್ಮ ಹೊರೆ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದಾರೆ.
ನವದೆಹಲಿ ರೇಲ್ವೆ ಭವನದಲ್ಲಿ ಸದಾನಂದಗೌಡ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿನ ರೇಲ್ವೆ ಯೋಜನೆಗಳಿಗೆ ಭೂಮಿಯನ್ನು ಕೊಡುವುದಕ್ಕೆ ಸಿದ್ದರಿದ್ದು, ಹೆಚ್ಚಿನ ಯೋಜನೆಗಳನ್ನು ಕರ್ನಾಟಕಕ್ಕೆ ಮಂಜೂರು ಮಾಡುವಂತೆ ಮನವಿ ಮಾಡಿದರು. ರಾಜ್ಯದ ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಶೇ. 50ರಷ್ಟು ಹಣವನ್ನು ಭರಿಸುತ್ತಿದ್ದು, ಇದು ಸರ್ಕಾರಕ್ಕೆ ಹೊರೆಯಾಗುತ್ತಿದೆ. ಹೀಗಾಗಿ ನಮ್ಮ ಹೊರೆ ಕಡಿಮೆ ಮಾಡಿ ಎಂದು ಸದಾನಂದಗೌಡರಿಗೆ ಮನವಿ ಮಾಡಿದ್ದರು. ರೇಲ್ವೆ ಯೋಜನೆಗಳಿಂದ ರಾಜ್ಯಕ್ಕೆ ಅನುಕೂಲವಾಗುವುದರಿಂದ ರಾಜ್ಯ ಸರ್ಕಾರವು ಹಣ ನೀಡಬೇಕು ಎಂದು ಡಿವಿಎಸ್ ಸಿದ್ದರಾಮಯ್ಯ ಅವರಿಗೆ ಮನದಟ್ಟು ಮಾಡಿದ್ದಾರೆ.
ಸಿಎಂ ಸಿದ್ದು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಇದೊಂದು ಔಪಚಾರಿಕ ಭೇಟಿಯಾಗಿದ್ದು, ಶುಭಾಶಯ ಕೋರುವುದಕ್ಕಾಗಿ ಬಂದಿದ್ದರು. ಆದರೆ ಯೋಜನಾವಾರು ಚರ್ಚೆಗೆ ಮತ್ತೊಮ್ಮೆ ಬರುತ್ತೇನೆಂದು ಹೇಳಿ ಹೋದರೆಂದು ಗೌಡರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


