ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ ಮುಲಾಯಂ

ಲಖನೌ: ಉತ್ತರಪ್ರದೇಶದಲ್ಲಿ ಮಹಿಳೆಯರ ಆಗುತ್ತಿರುವ ದೌರ್ಜನ್ಯದ ಬಗ್ಗೆ ಪ್ರಶ್ನಿಸಲು ಹೋದ ಮಾಧ್ಯಮಗಳ ವಿರುದ್ಧವೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕಿಡಿಕಾರಿದ್ದಾರೆ.
ನಿನ್ನೆಯಷ್ಟೇ ಅಖಿಲೇಶ್ ಯಾದವ್ ಅವರು ನಮ್ಮ ರಾಜ್ಯದಲ್ಲಿ ಸುರಕ್ಷಿತ ಇಲ್ಲದಂತೆ ಮಾದ್ಯಮಗಳು ಬಿಂಬಿಸುತ್ತಿವೆ ಎಂದು ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಅವರ ತಂದೆ ಮುಲಾಯಂ ಸಿಂಗ್ ಯಾದವ್ ಮಾದ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬದೌನ್ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮುಲಾಯಂ ಸಿಂಗ್ ಯಾದವ್ ಅವರನ್ನು ಮಾದ್ಯಮಗಳು ಪ್ರಶ್ನಿಸಲು ಮುಂದಾದಾಗ, ನೀವು ನಿಮ್ಮ ಕೆಲಸ ಮಾಡಿ, ನಾನು ನನ್ನ ಕೆಲಸ ಮಾಡುತ್ತೇನೆ ಎಂದು ಮಾದ್ಯಮಗಳಿಗೆ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ನಡೆದಿರುವ ಘಟನೆಯನ್ನೇ ದೊಡ್ಡ ಸಮಸ್ಯೆ ಎನ್ನುವ ರೀತಿ ಮಾದ್ಯಮಗಳು ಬಿತ್ತರಿಸುತ್ತಿವೆ. ಆದರೆ ಇಂತಹ ಘಟನೆಗಳು ಕೇವಲ ಉತ್ತರಪ್ರದೇಶದಲ್ಲಿ ಮಾತ್ರ ನಡೆಯುವುದಿಲ್ಲ, ದೇಶದ ಪ್ರತಿಯೊಂದು ರಾಜ್ಯದಲ್ಲಿ, ಪ್ರತಿಯೊಂದು ಸ್ಥಳದಲ್ಲಿ ನಡೆಯುತ್ತಿದೆ.
ಆದರೆ ಮಾಧ್ಯಮಗಳು ಮಾತ್ರ ಕೇವಲ ಉತ್ತರಪ್ರದೇಶದಲ್ಲಿ ಮಾತ್ರ ಇಂತಹ ಘಟನೆ ನಡೆದಿದೆ ಎನ್ನುವ ರೀತಿ ಸುದ್ದಿಯನ್ನು ಬಿತ್ತರಿಸುತ್ತಿವೆ ಎಂದು ಮೂಲಾಯಂ ದೂರಿದ್ದಾರೆ.
ಬದೌನ್‌ನಲ್ಲಿ ನಡೆದಂತೆ ಕೃತ್ಯ ಮಾದರಿಯಲ್ಲಿಯೇ ಬೆಂಗಳೂರಿನಲ್ಲಿ ನಡೆದಿದೆ. ಆದರೆ ಮಾಧ್ಯಮಗಳು ಏಕೆ ಅದನ್ನು ದೊಡ್ಡ ಸುದ್ದಿಯ ರೀತಿಯಲ್ಲಿ ಪ್ರಸಾರ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಮುಲಾಯಂ, ನೀವು ನಿಮ್ಮ ಕೆಲಸ ಮಾಡಿ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


