ಈಗಿನ ಸುದ್ದಿ

ಸುಪ್ರೀಂಕೋರ್ಟ್‌ಗೆ ಸುಬ್ರತಾ ರಾಯ್ ಸಲ್ಲಿಸಿದ್ದ ಅರ್ಜಿ ವಜಾ

ಸುಪ್ರೀಂಕೋರ್ಟ್‌ಗೆ ಸುಬ್ರತಾ ರಾಯ್ ಸಲ್ಲಿಸಿದ್ದ ಅರ್ಜಿ ವಜಾ
Published On :

ನವದೆಹಲಿ: ಸಹರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಅವರು ಗೃಹ ಬಂಧನಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.

ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ ಮಾರ್ಚ್ ೪ ರಿಂದ ಜೈಲು ಪಾಲಾಗಿರುವ ಸುಬ್ರತಾ ರಾಯ್ ಅವರು ತಮ್ಮನ್ನು ಗೃಹ ಬಂಧನದನಲ್ಲಿಡಲು ಆದೇಶಿಸಬೇಕು ಎಂದು ಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ ಸುಬ್ರತಾ ರಾಯ್ ಮನವಿಯನ್ನು ತಿರಸ್ಕರಿಸಿದ್ದು, ಇದರೊಂದಿಗೆ ಸುಬ್ರತಾ ರಾಯ್ ಅವರ ಜೈಲು ವಾಸ ಮುಂದುವರೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಬೇಕಾದರೆ ಕೂಡಲೇ 10 ಸಾವಿರ ಕೋಟಿ ರುಪಾಯಿಯನ್ನು ಠೇವಣಿಯಾಗಿ ಇಡುವಂತೆ ಕೋರ್ಟ್ ಸಹರಾ ಗ್ರೂಪ್‌ಗೆ ಸೂಚಿಸಿತ್ತು. ಅಷ್ಟು ಮೊತ್ತದ ಹಣವನ್ನು ಠೇವಣಿಯಾಗಿ ಇಡಲು ಸಾಧ್ಯವಿಲ್ಲ. ಕೂಡಲೇ ಅಂದರೆ ಸುಮಾರು 2,500 ಕೋಟಿ ರುಪಾಯಿ ಠೇವಣಿ ಇಡುವುದಾಗಿ ಸಹರಾ ಹೇಳಿತ್ತು. ಇದರಿಂದಾಗಿ ಸುಪ್ರೀಂಕೋರ್ಟ್ ಠೇವಣಿ ಇಡುವವರೆಗೂ ಸುಬ್ರತಾ ರಾಯ್ ಜಾಮೀನು ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಸಹರಾ ಸಂಸ್ಥೆಯ ಹೂಡಿಕೆದಾರರ 20 ಸಾವಿರ ಕೋಟಿ ಮೌಲ್ಯದ ಷೇರುಗಳನ್ನು ಹಿಂದಿರುಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.