ಈಗಿನ ಸುದ್ದಿ

ಪರಿಷತ್ತಿಗೆ ಪರಮೇಶ್ವರ್ ಆಯ್ಕೆಗೆ ನನ್ನ ವಿರೋಧವಿಲ್ಲ: ಸಿಎಂ ಸ್ಪಷ್ಟನೆ

ಪರಿಷತ್ತಿಗೆ ಪರಮೇಶ್ವರ್ ಆಯ್ಕೆಗೆ ನನ್ನ ವಿರೋಧವಿಲ್ಲ: ಸಿಎಂ ಸ್ಪಷ್ಟನೆ
Published On :

ನವದೆಹಲಿ: ವಿಧಾನಪರಿಷತ್‌ಗೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ಆಯ್ಕೆಗೆ ವಿರೋಧ ವಿಚಾರ ಆಧಾರ ರಹಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಿಧಾನಪರಿಷತ್‌ಗೆ ಪರಮೇಶ್ವರ್ ಅವರ ಆಯ್ಕೆಗೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಇದೆಲ್ಲಾ ಆಧಾರ ರಹಿತ ಸುದ್ದಿ ಎಂದು ಹೇಳಿದ್ದಾರೆ. ಅಲ್ಲದೆ ಪರಮೇಶ್ವರ್ ಹಾಗೂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡದೇ ಅವರನ್ನು ರಾಜ್ಯಸಭೆಗೆ ಚುನಾಯಿಸಿ ಕಳಿಸಿ ಎಂದು ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ಗೆ ಸೂಚಿಸಿದ್ದಾರೆ ಎಂಬ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಕೂತುಹಲಕ್ಕೆ ಕಾರಣವಾಗಿದೆ.

ಪರಮೇಶ್ವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಯಾಗಿದ್ದು, ವಿಧಾನಪರಿಷತ್‌ಗೆ ಪರಮೇಶ್ವರ್‌ರನ್ನು ಆಯ್ಕೆ ಮಾಡಿದರೆ ಉಪಮುಖ್ಯಮಂತ್ರಿ ಸ್ಥಾನ ನೀಡಲೇಬೇಕಾಗುತ್ತದೆ ಎಂಬುದನ್ನು ಅರಿತಿರುವ ಸಿಎಂ ಸಿದ್ದರಾಮಯ್ಯ ಅವರು ವಿಧಾನಪರಿಷತ್‌ಗೆ ಪರಮೇಶ್ವರ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಲೋಸಕಭೆ ಚುನಾವಣೆಯ ಬಳಿಕ ಪರಮೇಶ್ವರ್ ಅವರಿಗೆ ಒಂದು ಸ್ಥಾನ ಕಲ್ಪಿಸಿಬೇಕೆಂಬ ಬೇಡಿಕೆ ಪರಮೇಶ್ವರ್ ಬೆಂಬಲಿಗರಲ್ಲಿ ಹೆಚ್ಚುತ್ತಿದ್ದು, ಪರಮೇಶ್ವರ್ ಸೇರಿದಂತೆ ಮೂಲ ಕಾಂಗ್ರೆಸ್ಸಿಗರಲ್ಲಿ ಒಬ್ಬರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳು ಒತ್ತಡ ಹೇರಿದ್ದು, ಈ ಸಮಸ್ಯೆಯನ್ನು ಕಾಂಗ್ರೆಸ್ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.