ಈಗಿನ ಸುದ್ದಿ

ಜಿ ಕೆಟಗರಿ ಸೈಟ್: ಸರ್ಕಾರ, ಬಿಡಿಎಗೆ ' ಹೈ' ನೋಟೀಸ್

ಜಿ ಕೆಟಗರಿ ಸೈಟ್:  ಸರ್ಕಾರ, ಬಿಡಿಎಗೆ ' ಹೈ' ನೋಟೀಸ್
Published On :

ಬೆಂಗಳೂರು: ಜಿ ಕೆಟಗರಿಯಡಿ ಬಿಡಿಎ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಸರ್ಕಾರ ಮತ್ತು ಬಿಡಿಎಗೆ ಹೈಕೋರ್ಟ್ ಶುಕ್ರವಾರ ನೋಟೀಸ್ ನೀಡಿದೆ.

ನ್ಯಾಯಾಮೂರ್ತಿ ಬಿ.ಪದ್ಮರಾಜ್ ವರದಿ ಅನುಷ್ಠಾನಕ್ಕೆ ಕೋರಿ ಜಯಕುಮಾರ್ ಹೀರೇಮಠ್ ಎಂಬುವವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮತ್ತು ಬಿಡಿಎಗೆ ಪ್ರಕರಣ ಕುರಿತು ಪ್ರತಿಕ್ರಯಿಸುವಂತೆ ಸೂಚಿಸಿ ನೋಟೀಸ್ ಜಾರಿ ಮಾಡಿದೆ.

ರಾಜ್ಯದಲ್ಲಿ ನಡೆದಿರುವ ಭೂ ಹಗರಣ ಸಂಬಂಧ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿ.ಪದ್ಮರಾಜ್ ಅವರ ನೇತೃತ್ವದ ತನಿಖಾ ಆಯೋಗ ರಚಿಸಿತ್ತು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಿ.ಕೆಟಗರಿ ನಿವೇಶನ ವಿವಾದದ ಬಗ್ಗೆ ತನಿಖೆ ನಡೆಸಲು ಪದ್ಮರಾಜ್ ಆಯೋಗವನ್ನು ರಚಿಸಲಾಗಿತ್ತು.

ಬಿಡಿಎ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಆಯೋಗ ಸರ್ಕಾರ ವರದಿ ಸಲ್ಲಿಸಿತ್ತು.

ನ್ಯಾ.ಪದ್ಮರಾಜ್ ನೇತೃತ್ವದಲ್ಲಿ ನ್ಯಾ.ರಂಗವಿಠಲಾಚಾರ್, ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಪಿ.ಬಿ.ಮಹಿಷಿ ನಿವೃತ್ತ ಸೆಷನ್ ನ್ಯಾಯಾಧೀಶ ಎಚ್.ಎಂ ಭರತೇಶ್ ಅವರನ್ನು ಒಳಗೊಂಡ ಸಮಿತಿ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದು, ಕಡತಗಳನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

ಜಿ ಕೆಟಗರಿ ನಿವೇಶನ ಹಂಚಿಕೆಯಲ್ಲಾದ ಅಕ್ರಮ ಹಾಗೂ ಮಾರ್ಗದರ್ಶಿ ಸೂತ್ರಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.