ಷರೀಫ್ಗೆ ಖುಷಿ ಕೊಡದ ಭಾರತ ಭೇಟಿ: ಪಾಕ್ ಮಾಧ್ಯಮ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರಿಗೆ ಭಾರತ ಭೇಟಿ 'ಅಷ್ಟು ಖುಷಿ ಕೊಟ್ಟಿಲ್ಲ' ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ನವಾಜ್ ಷರೀಫ್ ಅವರು ಭಾರತದ ನೂತನ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದು ಸಮಾಧಾನಕರವಾಗಿಲ್ಲ ಎಂದು ಹೆಸರು ಹೇಳಲು ಇಚ್ಚಿಸಿದ ಪಿಎಂಎಲ್(ಎನ್) ನಾಯಕರೊಬ್ಬರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ದೆಹಲಿಯಲ್ಲಿ ಇಬ್ಬರು ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡದಿರುವುದು ಷರೀಫ್ ಅವರ ಅಸಮಾಧಾನಕ್ಕೆ ಕಾರಣ ಎಂದು ಪಿಎಂಎಲ್(ಎನ್) ಹಿರಿಯ ನಾಯಕರೊಬ್ಬರು ಡಾನ್ ನ್ಯೂಸ್ಗೆ ಹೇಳಿದ್ದಾರೆ.
ಕಳೆದ ತಿಂಗಳು ದೆಹಲಿಗೆ ಆಗಮಿಸಿದ್ದ ಷರೀಫ್ ನೇತೃತ್ವದ ನಿಯೋಗ ಮೋದಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಲು ಬಯಸಿತ್ತು. ಆದರೆ ಇದಕ್ಕೆ ಭಾರತದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬರಲಿಲ್ಲ ಎಂದು ವರದಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


