ರಣಬೀರ್ ಸಿಂಗ್ ಎನ್‌ಕೌಂಟರ್: 17 ಪೊಲೀಸರು ತಪ್ಪಿತಸ್ಥರು

ನವದೆಹಲಿ: 2009ರ ರಣಬೀರ್ ಸಿಂಗ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಉತ್ತರಾಖಂಡ್‌ನ 17 ಪೊಲೀಸರು ತಪ್ಪಿತಸ್ಥರು ಎಂದು ದೆಹಲಿಯ ಸಿಬಿಐಯ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ಎಂಬಿಎ ವಿದ್ಯಾರ್ಥಿ ರಣಬೀರ್ ಸಿಂಗ್ ನಕಲಿ ಎನ್‌ಕೌಂಟರ್ ಮಾಡಿದ್ದ 18 ಪೊಲೀಸರ ವಿರುದ್ಧ ಕೊಲೆ, ಅಪಹರಣ, ಕ್ರಿಮಿನಲ್ ಸಂಚು, ಸಾಕ್ಷ್ಯಾನಾಶ ಆರೋಪದಡಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಇನ್ಸ್‌ಪೆಕ್ಟರ್ ಹಾಗೂ ನಾಲ್ವರು ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ 17 ಪೊಲೀಸರನ್ನು ಅಪರಾಧಿಗಳು ಎಂದು ತೀರ್ಪು ನೀಡಿದೆ. ಈ ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಜೂನ್ 9 ರಂದು ಪ್ರಕಟಿಸಲಿದೆ.
2009 ಜುಲೈನಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು 2012 ಜೂನ್ 6 ರಂದು 18 ಪೊಲೀಸರ ವಿರುದ್ಧ ಕೋರ್ಟ್‌ಗೆ ದೋಷಾರೋಪ ಸಲ್ಲಿಸಿತ್ತು.
ಮೊದಲಿಗೆ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರಾಖಂಡ್‌ನ ಸಿಬಿ-ಸಿಐಡಿ ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ರಣಬೀರ್ ಸಿಂಗ್ ತಂದೆ ರವೀಂದ್ರ ಸಿಂಗ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ನಂತರ ಸುಪ್ರೀಂಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
ಗಾಝಿಯಾಬಾದ್ ಮೂಲದ ಎಂಬಿಎ ವಿಧ್ಯಾರ್ಥಿ ರಣ್‌ಬೀರ್ ಸಿಂಗ್ ತನ್ನ ಕೆಲ ಸ್ನೇಹಿತರೊಂದಿಗೆ ಸೇರಿಕೊಂಡು ಅಪರಾಧ ಕೃತ್ಯ ಎಸಗಲು ಪ್ರಯತ್ನಿಸುತ್ತಿದ್ದ ಎಂಬ ಆರೋಪದ ಮೇಲೆ ಆತನನ್ನು ಬಂಧಿಸಿದ್ದ ಉತ್ತರಾಖಂಡ್ ಪೊಲೀಸರು ಆ ನಂತರ ಆತನನ್ನು ಡೆಹ್ರಾಡೂನ್‌ನಲ್ಲಿ 2009ರಲ್ಲಿ ನಕಲಿ ಎನ್‌ಕೌಂಟರ್ ಮೂಲಕ ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


