ಈಗಿನ ಸುದ್ದಿ

ಕಾಂಗ್ರೆಸ್‌ಗೆ ಎಸ್.ಎಂ. ಕೃಷ್ಣ ಗುಡ್‌ಬೈ?

ಕಾಂಗ್ರೆಸ್‌ಗೆ ಎಸ್.ಎಂ. ಕೃಷ್ಣ ಗುಡ್‌ಬೈ?
Published On :

ನವದೆಹಲಿ: ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರಿಗೆ ರಾಜ್ಯಸಭೆ ಟಿಕೇಟ್ ನೀಡದೆ ಪ್ರೋ. ರಾಜೀವ್‌ಗೌಡ ಅವರಿಗೆ ಕಾಂಗ್ರೆಸ್ ಮಣೆಯಾಗುತ್ತಿರುವುದಕ್ಕೆ ಬೇಸರಗೊಂಡು ಕೃಷ್ಣ ಅವರು ಕಾಂಗ್ರೆಸ್‌ಗೆ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ರಾಜ್ಯಸಭೆ ಚನಾವಣೆಗೆ ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಹಾಗೂ ಎಐಸಿಸಿ ವಕ್ತಾರರಾಗಿರುವ ಪ್ರೋ. ರಾಜೀವ್‌ಗೌಡ ಅವರಿಗೆ ಕಾಂಗ್ರೆಸ್ ಟಿಕೇಟ್ ನೀಡಿದೆ ಎಂಬ ಮಾಹಿತಿ ಎಐಸಿಸಿ ಮೂಲಗಳಿಂದ ತಿಳಿದುಬಂದಿದೆ.

ಮೊದಲಿಗೆ ರಾಜ್ಯಸಭೆ ಚುನಾವಣೆಗೆ ಎಸ್.ಎಂ. ಕೃಷ್ಣ ಹಾಗೂ ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿತ್ತು. ಇದೀಗ ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿರುವ ಕಾಂಗ್ರೆಸ್ ಎಸ್.ಎಂ. ಕೃಷ್ಣ ಅವರ ಬದಲಿಗೆ ಎಐಸಿಸಿ ವಕ್ತಾರರಾಗಿರುವ ರಾಜೀವ್‌ಗೌಡ ಅವರಿಗೆ ರಾಜ್ಯಸಭೆ ಟಿಕೇಟ್ ನೀಡುತ್ತಿರುವುದರಿಂದ ಬೇಸರಗೊಂಡು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೂ ಎಸ್.ಎಂ ಕೃಷ್ಣ ರಾಜಿನಾಮೆ ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.