ಈಗಿನ ಸುದ್ದಿ

ಕೇಂದ್ರದ ಮುಂದೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಪ್ರಸ್ತಾಪ ಇಲ್ಲ

ಕೇಂದ್ರದ ಮುಂದೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಪ್ರಸ್ತಾಪ ಇಲ್ಲ
Published On :

ಬೆಂಗಳೂರು: ಕೇಂದ್ರ ಸರ್ಕಾರದ ಮುಂದೆ ಕಾವೇರಿ ನಿರ್ವಹಣಾ ಮಂಡಳಿ ರಚನೆಯ ಯಾವುದೇ ಪ್ರಸ್ತಾಪ ಇಲ್ಲ. ಇದೆಲ್ಲಾ ಬರೀ ಊಹಾಪೋಹ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಅನಂತ್ ಕುಮಾರ್, ಇಂತಹ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿಲ್ಲ. ಒಂದು ವೇಳೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ, ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಈಗಿರುವ ಉಸ್ತುವಾರಿ ಸಮಿತಿಯನ್ನು ಮುಂದುವರೆಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಅಲ್ಲದೆ ಈ ಸಂಬಂಧ ತಾವು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರೊಂದಿಗೆ ಚರ್ಚಿಸಿದ್ದು, ಮಂಡಳಿ ರಚನೆಯ ಕುರಿತು ಜಲಸಂಪನ್ಮೂಲ ಇಲಾಖೆ ಯಾವುದೇ ಟಿಪ್ಪಣಿ ಸಿದ್ಧಪಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿರುವುದಾಗಿ ಅನಂತ್ ಕುಮಾರ್ ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಕಾವೇರಿ ಜಲ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಟಿಪ್ಪಣಿ ಸಿದ್ಧಪಡಿಸಿದೆ. ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನಾ ಪ್ರಕ್ರಿಯೆ ಆರಂಭಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ  ಜೂನ್ 10ರಂದು ಸರ್ವಪಕ್ಷ ನಿಯೋಗ ಕರೆದೊಯ್ದು, ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.