ಮೋದಿ ವಾಷಿಂಗ್ಟನ್ ಭೇಟಿ ದಿನಾಂಕ ಇನ್ನೂ ನಿಗದಿಯಾಗಿಲ್ಲ: ಅಮೆರಿಕ

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾಷಿಂಗ್ಟನ್ಗೆ ಭೇಟಿ ನೀಡುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಶನಿವಾರ ಅಮೆರಿಕ ಹೇಳಿದೆ.
ಮೋದಿ ಅಮೆರಿಕ ಪ್ರವಾಸದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ ಸರ್ಕಾರದ ಉಪ ವಕ್ತಾರ, ಮಾರೀ ಹರ್ಫ್, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡುವ ದಿನಾಂಕ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಕಾರ್ಯದರ್ಶಿ ಜಾನ್ ಕೆರ್ರಿ ಇಬ್ಬರೂ ಭಾರತದ ನೂತನ ಪ್ರಧಾನಿಯ ಸ್ವಾಗತಕ್ಕೆ ಉತ್ಸುಕರಾಗಿರುವುದಾಗಿ ಹೇಳಿದ್ದಾರೆ. ಆದರೆ ಆ ಬಗ್ಗೆ ಇನ್ನೂ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸೆಪ್ಟೆಂಬರ್ 26 ಅಥವಾ 30 ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹರ್ಫ್ ತಿಳಿಸಿದ್ದಾರೆ.
ಮೇ 16ರಂದು ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ದೂರವಾಣಿ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಿದ್ದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದನ್ನು ಮೋದಿ ಸ್ವೀಕರಿಸಿದ್ದಾರೆ.
ಉಭಯ ನಾಯಕರ ಭೇಟಿ ಬಗ್ಗೆ ಅಮೆರಿಕ ಆಡಳಿತದ ಜತೆ ಚರ್ಚೆ ನಡೆಸುವಂತೆ ವಾಷಿಂಗ್ಟನ್ನಲ್ಲಿರುವ ರಾಯಭಾರಿ ಎಸ್.ಜೈಶಂಕರ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಾಷಿಂಗ್ಟನ್ನಲ್ಲಿ ಅಮೆರಿಕ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಜೈಶಂಕರ್ ಪ್ರಧಾನಿ ಜತೆ ಚರ್ಚಿಸಲಿದ್ದಾರೆ. 2002ರ ಗುಜರಾತ್ ಗಲಭೆ ಹಿನ್ನೆಲೆಯಲ್ಲಿ ಹಿಂದಿನ ಅಮೆರಿಕ ಸರ್ಕಾರ 2005ರಲ್ಲಿ ಮೋದಿಗೆ ನಿಷೇಧ ಹೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


