'ಮಿಷನ್ ವಿಸ್ತಾರ್' ಮೂಲಕ ಪಕ್ಷ ಸಂಘಟನೆ: ಕೇಜ್ರಿವಾಲ್

ನವದೆಹಲಿ: ಲೋಕಸಭಾ ಚುನಾವಣೆ ಹೀನಾಯ ಸೋಲಿನ ನಂತರ ಛಿದ್ರವಾಗಿದ್ದ ಆಮ್ ಆದ್ಮಿ ಪಕ್ಷದ ಪುನರ್ ಸಂಘಟನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂದಾಗಿದ್ದಾರೆ.
ಕಾರ್ಯಕಾರಣಿ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಲೋಕಸಭೆ ಚುನಾವಣೆಯ ಸೋಲನ್ನು ಬದಿಗಿಟ್ಟು 'ಮಿಷನ್ ವಿಸ್ತಾರ್' ಯೋಜನೆಯ ಮೂಲಕ ಪಕ್ಷವನ್ನು ಪುನರ್ ಸಂಘಟನೆಗೆ ಮಾಡಲಾಗುವುದು ಅಲ್ಲದೆ ಮುಂದಿನಗಳಲ್ಲಿ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲು ಆಪ್ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಈ ತೀರ್ಮಾನಿಸಿದ್ದೇವೆ ಎಂದರು.
ದೇಶದ ಎಲ್ಲಾ ರಾಜ್ಯಗಳಲ್ಲಿರುವ ಆಪ್ ಘಟಕಗಳನ್ನು ಪುನರ್ ರಚಿಸಲಾಗುವುದು ಮತ್ತು ಭೂತ್ ಮಟ್ಟದಿಂದ ಪಕ್ಷವನ್ನು ಪುನಃ ಸಂಘಟಿಸಲಾಗುವುದು ಎಂದರು.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ವಂದನೆಗಳು ಕೇಜ್ರಿವಾಲ್ ತಿಳಿಸಿದ್ದು, ವಿದೇಶಗಳಲ್ಲಿ ಅಡಗಿಸಿಟ್ಟಿರುವ ಕಪ್ಪು ಹಣ ಮರಳಿ ತರುವ ಪ್ರಕ್ರಿಯೆಗೆ ಬಿಜೆಪಿ ಚಾಲನೆ ನೀಡಿದ್ದು, ಇದಕ್ಕಾಗಿ ಎಸ್ಐಟಿ ತನಿಖಾ ತಂಡವನ್ನು ನೇಮಕ ಮಾಡಿರುವುದು ಸಂತಸ ತಂದಿದೆ. ಕಪ್ಪು ಹಣವನ್ನು ಮರಳಿ ತರುವ ವಿಚಾರದಲ್ಲಿ ಮೋದಿಗೆ ಬೆಂಬಲ ನೀಡುತ್ತೇನೆ ಎಂದರು.
ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರುತ್ತಿದ್ದು, ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಅದೇ ರೀತಿ ಗ್ಯಾಸ್ ದರ ಏರಿಕೆ ಮಾಡಿ ಮಧ್ಯಮ ವರ್ಗದ ಜನತೆಗೆ ಹೊರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


