ಸೀಮಾಂಧ್ರದ ಮೊದಲ ಸಿಎಂ ಆಗಿ ಬಾಬು ಪ್ರಮಾಣ ವಚನ

ಹೈದರಾಬಾದ್: ವಿಭಜಿತ ಆಂಧ್ರ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೈದರಾಬಾದಿನಲ್ಲಿ ಭಾನುವಾರ ಸಂಜೆ 7.25ಕ್ಕೆ ನೂತನ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಂಧ್ರ ಪ್ರದೇಶ ಮತ್ತು ತೆಂಲಗಾಣ ರಾಜ್ಯಗಳ ಜಂಟಿ ರಾಜ್ಯಪಾಲ ಇ.ಎಸ್.ಎಲ್ ನರಸಿಂಹನ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ.
ಪ್ರಮಾಣ ವಚನ ಸಮಾರಂಭಕ್ಕೆ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಸುಮಾರು 30 ಕೋಟಿ ರುಪಾಯಿ ವೆಚ್ಚದಲ್ಲಿ ಸಮಾರಂಭಕ್ಕೆ ಸಿದ್ಧತೆ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಸಿನಿಮಾ ನಟರು, ಹಿರಿಯ ರಾಜಕಾರಣಿಗಳು ಸೇರಿದಂತೆ ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದೆ. ಅಲ್ಲದೆ ಕಾರ್ಯಕ್ರಮಕ್ಕೆ ಸುಮಾರು 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಗುಂಟೂರು ಸಮೀಪ ಬಂದ ಅತಿಥಿಗಳಿಗಾಗಿ ಮತ್ತು ಟಿಡಿಪಿ ಕಾರ್ಯಕರ್ತರಿಗಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.
ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ ಸಮಾರಂಭಕ್ಕೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಅರುಣ್ ಜೇಟ್ಲಿ ಅವರು ಭಾಗವಹಿಸುವ ಸಾಧ್ಯತೆ ಇದೆ. ಇದಲ್ಲದೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಛತ್ತೀಸ್ ಗಡ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನೂ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇವಿಷ್ಟೇ ಅಲ್ಲದೆ ಜೂ.ಎನ್.ಟಿ.ಆರ್, ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್, ಹಿಂದೂಪುರ ಕ್ಷೇತ್ರದ ಶಾಸಕ ಮತ್ತು ನಟ ಬಾಲಕೃಷ್ಣ ಸೇರಿದಂತೆ ಖ್ಯಾತ ತೆಲುಗು ಸಿನಿಮಾ ನಟರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ದುಂದುವೆಚ್ಚಕ್ಕೆ ಪ್ರತಿಪಕ್ಷಗಳ ಕಿಡಿ
ಈ ನಡುವೆ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೆಲುಗು ದೇಶಂ ಪಕ್ಷ ಮಾಡುತ್ತಿರುವ ವೆಚ್ಚದ ಕುರಿತು ಪ್ರತಿಪಕ್ಷಗಳು ಆಕ್ಷೇಪವೆತ್ತಿವೆ. ಚಂದ್ರಬಾಬು ನಾಯ್ಡು ಅವರು ಅನಗತ್ಯವಾಗಿ ಕೋಟ್ಯಂತರ ರುಪಾಯಿಗಳನ್ನು ವೆಚ್ಚಮಾಡುತ್ತಿದ್ದಾರೆ. ಪ್ರತಿಜ್ಞಾ ವಿಧಿ ಸಮಾರಂಭಕ್ಕೆ ಕೋಟ್ಯಂತರ ಹಣ ವ್ಯಯಿಸುವ ಅಗತ್ಯವಿರಲಿಲ್ಲ ಎಂದು ಟೀಕಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


