ಈಗಿನ ಸುದ್ದಿ

ವಿಜಯ್ ಪಂಡಿತ್ ಹತ್ಯೆ: 4 ಶಂಕಿತರ ಬಂಧನ

ವಿಜಯ್ ಪಂಡಿತ್ ಹತ್ಯೆ: 4 ಶಂಕಿತರ ಬಂಧನ
Published On :

ನೋಯ್ಡಾ: ದೆಹಲಿಯ ಬಿಜೆಪಿ ಮುಖಂಡ ವಿಜಯ್ ಪಂಡಿತ್ ಹತ್ಯೆ ಮಾಡಿದ ಆರೋಪದ ಮೇಲೆ ನಾಲ್ವರು ಶಂಕಿತರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ವಿಜಯ್ ಪಂಡಿತ್ ಹತ್ಯೆ ನಂತರ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ ಪೊಲೀಸರು ಇಂದು ನಾಲ್ವರು ಶಂಕಿತರನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಉತ್ತರ ಪ್ರದೇಶಕ್ಕೆ ಸೇರುವ ಗ್ರೇಟರ್ ನೋಯ್ಡಾ ಪ್ರದೇಶದ ಗೌತಮ್ ಬುದ್ಧ ಜಿಲ್ಲೆಯ ದಾದ್ರಿ ನಗರದಲ್ಲಿ ಶನಿವಾರ ರಾತ್ರಿ 37 ವರ್ಷದ ವಿಜಯ್ ಪಂಡಿತ್ ಅವರ ಮೇಲೆ ದುಷ್ಕರ್ಮಿಗಳು ಐದು ಸುತ್ತಿನ ಗುಂಡು ಹಾರಿಸಿ ಕೊಲೆಗೈದು ಪರಾರಿಯಾಗಿದ್ದರು.

ನಿನ್ನೆ ರಾತ್ರಿ 8.30 ಸುಮಾರಿಗೆ ಈ ಘಟನೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ವಿಜಯ್ ಅವರ ಹತ್ಯೆಯಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ದಾದ್ರಿನಗರ, ಜಟಿ ರಸ್ತೆ ಮುಂತಾದೆಡೆ ಸುಮಾರು 16ಕ್ಕೂ ಅಧಿಕ ವಾಹನಗಳನ್ನು ಸುಟ್ಟು ಹಾಕಿದ್ದು, ಕಾರ್ಯಕರ್ತರ ಪ್ರತಿಭಟನೆ ಭಾನುವಾರವೂ ಮುಂದುವರೆದಿದೆ.

ವೈದ್ಯಕೀಯ ವರದಿ ಪ್ರಕಾರ ವಿಜಯ್ ಪಂಡಿತ್ ಅವರ ಬಾಯಿ, ಎದೆ, ಕಿವಿ ಹಿಂಭಾಗಕ್ಕೆ ಗುಂಡು ತಗುಲಿದೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಮಲಗಿದ್ದಿ ವಿಜಯ್ ಅವರನ್ನು ದಾದ್ರಿಯ ಮೋಹನ್ ಸ್ವರೂಪ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಆನಂತರ ಗಾಜಿಯಾಬಾದಿನ ಯಶೋದಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿನ ವೈದ್ಯರು ವಿಜಯ್ ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.