ಈಗಿನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆಗೆ ವಿರೋಧ

ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆಗೆ ವಿರೋಧ
Published On :

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆ ಅಂತ್ಯವಾಗಿದೆ.

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ನಡೆದ ಸರ್ವಪಕ್ಷ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆಗೆ ಒಕ್ಕೋರಲಿನ ವಿರೋಧ ವ್ಯಕ್ತವಾಗಿದೆ.

ನಾಳೆಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ. ಇದಕ್ಕೂ ಮೊದಲ ರಾಜ್ಯವನ್ನು ಪ್ರತಿನಿಧಿಸುತ್ತಿರುವ ನಾಲ್ವರು ಕೇಂದ್ರ ಸಚಿವರೊಂದಿಗೆ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಲಿದ್ದಾರೆ. ನವದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಕೇಂದ್ರ ಸಚಿವರಾದ, ಡಿವಿ ಸದಾನಂದಗೌಡ, ಅನಂತ್ ಕುಮಾರ್, ಜಿಎಂ ಸಿದ್ದೇಶ್ವರ ಮತ್ತು ವೆಂಕಯ್ಯನಾಯ್ಡು ಅವರನ್ನು ನಾಳೆ ಬೆಳಗ್ಗೆ 8.30ಕ್ಕೆ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಬಳಿಕ ಅಂದರೆ ಬೆಳಗ್ಗೆ 11 ಗಂಟೆಗೆ ರಾಜ್ಯದ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ನರೇಂದ್ರಮೋದಿ ಅವರನ್ನು ಸಿದ್ದರಾಮಯ್ಯ ಅವರು ಭೇಟಿ ಚರ್ಚಿಸಲಿದ್ದಾರೆ.

ಇಂದು ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯ ಸರ್ಕಾರದ ವಿರೋಧವಿದ್ದು, ಇದಕ್ಕೆ ಎಲ್ಲ ಮುಖಂಡರ ಸಮ್ಮತಿ ಕೂಡ ಇದೆ. ಕಾವೇರಿ ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ. ಈ ಹಂತದಲ್ಲಿ ನಿರ್ವಹಣಾ ಮಂಡಳಿ ರಚನೆ ಅನಗತ್ಯ. ಹೀಗಾಗಿಯೇ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡು ಚರ್ಚಿಸುತ್ತೇನೆ. ನೆಲ, ಜಲ ಮತ್ತು ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಲು ಮನವಿ ಮಾಡಿದ್ದೇನೆ ಎಂದು ಸಿದ್ಧರಾಮಯ್ಯ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.