ಟಿಆರ್ಎಸ್ ಸಂಸದರ ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಪೋಲವರಂ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಲೋಕಸಭಾ ಅಧಿವೇಶನದಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿ ಸಂಸದರು ಪ್ರತಿಭಟನೆ ನಡೆಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಪೋಲವರಂ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ನೀಡಲಾಗಿದ್ದ ಆದೇಶದ ವಿರುದ್ಧ ಲೋಕಸಭಾ ಕಲಾಪದಲ್ಲಿ ಟಿಆರ್ಎಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದು, ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಆದೇಶದಿಂದ ಸ್ಥಳೀಯ ಬುಡಕಟ್ಟು ಜನಾಂಗದ ಆಶಯಗಳಿಗೆ ಧಕ್ಕೆಯಾಗಲಿದೆ. ಹೀಗಾಗಿ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ.
ಇದಕ್ಕೆ ಬಿಜೆಡಿ ಪಕ್ಷದ ಸಂಸದರು ಕೂಡ ಕೈಜೋಡಿಸಿದ್ದು, ಪ್ರತಿಭಟನಾ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಡ ಸಂಸದರು ಕೂಗುತ್ತಿದ್ದರು. ಈ ನಡುವೆ ಮಧ್ಯಪ್ರವೇಶ ಮಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸಂಸದರಿಗೆ ತಮ್ಮ ತಮ್ಮ ಸ್ಥಾನಗಳಿಗೆ ಮರಳುವಂತೆ ಸೂಚಿಸದರು. ಅಲ್ಲದೆ ಈ ಬಗ್ಗೆ ಚರ್ಚೆ ನಡೆಸಲು ಇದು ಸಮಯವಲ್ಲ. ಈ ವಿಚಾರ ಕಲಾಪದಲ್ಲಿ ಚರ್ಚೆಗೆ ಬಂದಾಗ ಕೂಲಂಕುಷವಾಗಿ ಚರ್ಚೆ ನಡೆಸೋಣ, ಈಗ ಶಾಂತಿಯುತವಾಗಿ ಕಲಾಪ ನಡೆಯಲು ಅನುವು ಮಾಡಿಕೊಡಿ ಎಂದು ಮನವಿ ಮಾಡಿದರು. ಆದರೂ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ ಕಾರಣ ಕೊನೆಗೆ ಅನ್ಯ ಮಾರ್ಗವಿಲ್ಲದೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಹೈದರಾಬಾದಿನಲ್ಲಿ ಮಾತನಾಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು, ಪೋಲವರಂ ಯೋಜನೆಗೆ ತಮ್ಮ ವಿರೋಧವಿದೆ. ಲೋಕಸಭಾ ಕಲಾಪದಲ್ಲಿ ಈ ವಿಚಾರ ಚರ್ಚೆಗ ಬಂದಾಗ ನಾವು ಖಂಡಿತವಾಗಿಯೂ ಇದನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


