ಈಗಿನ ಸುದ್ದಿ

ನಕಲಿ ಎನ್‌ಕೌಂಟರ್: 17 ಪೊಲೀಸರಿಗೆ ಜೀವಾವಧಿ ಶಿಕ್ಷೆ

ನಕಲಿ ಎನ್‌ಕೌಂಟರ್: 17 ಪೊಲೀಸರಿಗೆ ಜೀವಾವಧಿ ಶಿಕ್ಷೆ
Published On :

ನವದೆಹಲಿ: 2009ರಲ್ಲಿ ನಡೆದ ರಣಬೀರ್ ಸಿಂಗ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಉತ್ತರಾಖಂಡ್‌ನ 17 ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ದೆಹಲಿಯ ಸ್ಥಳೀಯ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಎರಡು ದಿನಗಳ ಹಿಂದೆಯಷ್ಟೇ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ 17 ಪೊಲೀಸರು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು. ಇಂದು ಕೋರ್ಟ್ 17 ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಗಾಝೀಯಾಬಾದ್ ಮೂಲದ ಎಂಬಿಎ ವಿದ್ಯಾರ್ಥಿ ರಣಬೀರ್ ಸಿಂಗ್ ತನ್ನ ಕೆಲ ಸ್ನೇಹಿತರೊಂದಿಗೆ ಸೇರಿಕೊಂಡು ಅಪರಾಧ ಕೃತ್ಯ ಎಸಗಲು ಪ್ರಯತ್ನಿಸುತ್ತಿದ್ದ ಎಂಬ ಆರೋಪದ ಮೇಲೆ ಆತನನ್ನು ಬಂಧಿಸಿದ್ದ ಉತ್ತರಾಖಂಡ್ ಪೊಲೀಸರು ಆತನನ್ನು ಡೆಹ್ರಾಡೂನ್‌ನಲ್ಲಿ ಎನ್‌ಕೌಂಟರ್ ಮಾಡಿದ್ದರು.

ರಣಬೀರ್ ಪೋಷಕರು ತಮ್ಮ ಮಗನನ್ನು ನಕಲಿ ಎನ್‌ಕೌಂಟರ್ ಮಾಡಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಮೊದಲಿಗೆ ಪ್ರಕರಣದ ತನಿಖೆಯನ್ನು ಸಿಬಿ-ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ತದ ನಂತರ ಪೋಷಕರು, ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

2009ರ ಜುಲೈನಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು 2012 ಜೂನ್ 6 ರಂದು 18 ಪೊಲೀಸರ ವಿರುದ್ಧ ಕೋರ್ಟ್‌ಗೆ ದೋಷಾರೋಪ ಸಲ್ಲಿಸಿತ್ತು.

ನಕಲಿ ಎನ್‌ಕೌಂಟರ್ ಮಾಡಿದ್ದ 18 ಪೊಲೀಸರ ವಿರುದ್ಧ ಕೊಲೆ, ಅಪಹರಣ, ಕ್ರಿಮಿನಲ್ ಸಂಚು, ಸಾಕ್ಷ್ಯಾನಾಶ ಆರೋಪದಡಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಇನ್ಸ್‌ಪೆಕ್ಟರ್ ಹಾಗೂ ನಾಲ್ವರು ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ 17 ಪೊಲೀಸರನ್ನು ಅಪರಾಧಿಗಳು ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.