ಈಗಿನ ಸುದ್ದಿ

'ಅಭಿನೇತ್ರಿ' ಬಿಡುಗಡೆಗೆ ನ್ಯಾಯಾಲಯದ ತಡೆ

'ಅಭಿನೇತ್ರಿ' ಬಿಡುಗಡೆಗೆ ನ್ಯಾಯಾಲಯದ ತಡೆ
Published On :

ಬೆಂಗಳೂರು: ನಟಿ ಪೂಜಾಗಾಂಧಿ ಅಭಿನಯದ ಬಹುನಿರೀಕ್ಷಿತ ಚಿತ್ರ ಅಭಿನೇತ್ರಿಗೆ ನ್ಯಾಯಾಲಯ ಮಂಗಳವಾರ ತಡೆ ನೀಡಿದೆ.

ನಟಿ ಪೂಜಾಗಾಂಧಿ ಅವರು ನಟಿಸಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ಚಿತ್ರ ಅಭಿನೇತ್ರಿ ಚಿತ್ರಕ್ಕೆ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. ಲೇಖಕಿ ಭಾಗ್ಯ ಕೃಷ್ಣಮೂರ್ತಿ ಎಂಬುವವರು ದಾಖಲಿಸಿದ್ದ ದೂರಿನ ಅನ್ವಯ ಚಿತ್ರ ಬಿಡುಗಡೆಗೆ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ.

ಅಭಿನೇತ್ರಿ ಚಿತ್ರದ ಕಥೆ ತಮ್ಮದಾಗಿದ್ದು, ತಮ್ಮ ಅನುಮತಿ ಪಡೆಯದೇ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ಚಿತ್ರಕ್ಕೆ ತಡೆ ನೀಡಬೇಕು ಎಂದು ಆರೋಪಿಸಿ ಭಾಗ್ಯ ಅವರು ದೂರು ಸಲ್ಲಿಸಿದ್ದರು. ಇಂದು ದೂರಿನ ವಿಚಾರಣೆ ನಡೆಸಿದ 10ನೇ ಸಿಟಿ ಸಿವಿಲ್‌ಕೋರ್ಟ್ ಚಿತ್ರ ಬಿಡುಗಡೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ ಚಿತ್ರದ ಸ್ಕ್ರಿಪ್ಟ್ ಮತ್ತು ರೀಲ್‌ಗಳನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.

ಭಾಗ್ಯ ಕೃಷ್ಣಮೂರ್ತಿ ಎಂಬುವವರು 'ಅಭಿನೇತ್ರಿ ಅಂತರಂಗ' ಎಂಬ ಪುಸ್ತಕವನ್ನು ರಚಿಸಿದ್ದು, ಈ ಪುಸ್ತಕದಲ್ಲಿನ ಕಥೆಯನ್ನು ಆಧಾರವಾಗಿಟ್ಟುಕೊಂಡೇ ಪೂಜಾ ಗಾಂಧಿ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂಬುದು ಅವರ ವಾದ. ಅಂತೆಯೇ ಚಿತ್ರ ನಿರ್ಮಾಣಕ್ಕೂ ಮುನ್ನ ನನ್ನ ಅನುಮತಿ ಪಡೆಯದೆಯೇ ಅವರು ಚಿತ್ರ ನಿರ್ಮಿಸುತ್ತಿದ್ದಾರೆ. ಹೀಗಾಗಿ ಚಿತ್ರಕ್ಕೆ ತಡೆ ನೀಡಬೇಕು ಎಂದು ಭಾಗ್ಯ ಕೃಷ್ಣಮೂರ್ತಿ ಅವರು ಈ ಹಿಂದೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಚಿತ್ರಕ್ಕೆ ತಾತ್ಕಾಲಿಕ ತಡೆ ನೀಡಿದೆ.

ನ್ಯಾಯಾಲಯದ ವಿಚಾರಣೆ ವೇಳೆ ಪೂಜಾಗಾಂಧಿ ಅವರು ಕೂಡ ಹಾಜರಿದ್ದು, ಕಲಾಪವನ್ನು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಿತ್ರದ ನಿರ್ಮಾಪಕಿ ಮತ್ತು ನಟಿ ಪೂಜಾಗಾಂಧಿ ಅವರು, 'ತಮ್ಮ ಚಿತ್ರಕ್ಕೂ ಭಾಗ್ಯ ಕೃಷ್ಣಮೂರ್ತಿ ಅವರ ಪುಸ್ತಕಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಅವರ ಪುಸ್ತಕವನ್ನು ಓದಿಲ್ಲ. ಆದರೆ ಚಿತ್ರದ ಕಥೆ ಅವರ ಪುಸ್ತಕದಲ್ಲ. ಚಿತ್ರ ಬಹುತೇಕ ಪೂರ್ಣಗೊಂಡಿದ್ದು, ಈಗ ಅವರೇಕೆ ಚಿತ್ರದ ವಿರುದ್ಧ ದೂರು ದಾಖಲಿಸಿದ್ದಾರೆ ಎಂಬುದು ತಿಳಿಯುತ್ತಿಲ್ಲ. ನಾನು ಹೈಕೋರ್ಟ್‌ನಲ್ಲಿ ಈ ಬಗ್ಗೆ ದೂರು ದಾಖಲಿಸುತ್ತೇನೆ. ನನ್ನ ಹೋರಾಟವನ್ನು ಮುಂದುವರೆಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.