ಕೊಲಂಬೋದಲ್ಲಿ ಜೆಡಿಎಸ್ ನಾಯಕರ ಸಭೆ

ಬೆಂಗಳೂರು: ಜ್ಯಾತ್ಯಾತೀತ ಜನತಾದಳ ಪಕ್ಷದ ನಾಯಕರು ಶ್ರೀಲಂಕಾ ಪ್ರವಾಸಕ್ಕೆ ಮುಂದಾಗಿದ್ದು, ಕೊಲಂಬೋದಲ್ಲಿ ಪಕ್ಷದ ಆಂತರಿಕ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಜೆಡಿಎಲ್ಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಾಯಕರು ಇದೇ ಜೂನ್ 15ರಿಂದ 19ರವರೆಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಕೊಲಂಬೋದ ಖಾಸಗಿ ಹೊಟೆಲ್ನಲ್ಲಿ ಜೆಡಿಎಸ್ ಆಂತರಿಕ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಸಭೆಯಲ್ಲಿ ಪಕ್ಷದ ಮುಂದಿನ ರಾಜ್ಯಾಧ್ಯಕ್ಷರ ನೇಮಕ, ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಪಕ್ಷದ ಆಂತರಿಕ ವಿಚಾರಗಳು ಕುರಿತು ಚರ್ಚಿಸಲು ನಿರ್ಧರಿಸಲಾಗಿದೆ.
ಈ ಹಿಂದೆ ಪಕ್ಷದ ಮುಖಂಡರಾದ ಕುಮಾರಸ್ವಾಮಿ ಅವರು ಪಕ್ಷದ ಶಾಸಕ ಮತ್ತು ಹಿರಿಯ ನಾಯಕರ ಕೈಗೆ ಸಿಗುತ್ತಿಲ್ಲ. ಹೀಗಾಗಿ ಪಕ್ಷದ ಆಂತರಿಕ ವಿಚಾರಗಳನ್ನು ಅವರೊಂದಿಗೆ ಹಂಚಿಕೊಳ್ಳಲಾಗುತ್ತಿಲ್ಲ ಎಂಬು ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಈ ಪ್ರವಾಸವನ್ನು ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


