ಪರಿಷತ್ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

ಬೆಂಗಳೂರು: ವಿಧಾನಪರಿಷತ್ ಚುನಾವಣೆ 7 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ್ ಅವರು ಮಂಗಳವಾರ ತಿಳಿಸಿದ್ದಾರೆ.
ನಾಮಪತ್ರ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಓಂಪ್ರಕಾಶ್, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರವಾಗಿದೆ. ವಿಧಾನಪರಿಷತ್ ಚುನಾವಣಗೆ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಕಾಂಗ್ರೆಸ್ನಿಂದ 4, ಬಿಜೆಪಿಯಿಂದ 1, ಜೆಡಿಎಸ್ನಿಂದ 1, ಹಾಗೂ ಜೆಡಿಎಸ್, ಬಿಜೆಪಿ ಬೆಂಬಲಿತ 1 ನಾಮಪತ್ರ ಅಂಗೀಕಾರವಾಗಿದೆ ಎಂದರು.
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ನಿಂದ 2, ಬಿಜೆಪಿಯಿಂದ 1, ಕಾಂಗ್ರೆಸ್ ಜೆಡಿಎಸ್ ಬೆಂಬಲಿತ 1 ನಾಮಪತ್ರ ಅಂಗೀಕಾರವಾಗಿದೆ. ಇದೇ ವೇಳೆ, ರಾಜಸಭೆಗೆ ಸಲ್ಲಿಸಿದ್ದ 2 ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಅನುಮೋದಕರ ಸಹಿ ಇಲ್ಲದ ಕಾರಣ ಪದ್ಮರಾಜನ್, ಕೆ. ಮೋಹನ್ ನಾಮಪತ್ರ ತಿರಸ್ಕೃರಿಸಲಾಗಿದೆ ಎಂದು ಓಂಪ್ರಕಾಶ್ ತಿಳಿಸಿದ್ದಾರೆ.
ವಿಧಾನಪರಿಷತ್ಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜಯಮ್ಮ, ಎನ್. ಎಸ್. ಬೋಸೆರಾಜು ಹಾಗೂ ಎಚ್.ಎಂ. ರೇವಣ್ಣ, ಬಿಜೆಪಿಯಿಂದ ಕೆ. ಎಸ್. ಈಶ್ವರಪ್ಪ, ಜೆಡಿಎಸ್ ಅಭ್ಯರ್ಥಿ ಡಾ.ಟಿ.ಎ. ಶರವಣ ಹಾಗೂ ಬಿಜೆಪಿ-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಡಿ.ಯು ಮಲ್ಲಿಕಾರ್ಜುನ ಅವರ ನಾಮಪತ್ರಗಳು ಅಂಗೀಕಾರವಾಗಿದ್ದು, ಇವರೆಲ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೂ.12ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದ್ದು, 12ರ ಸಂಜೆ ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಸ್ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


