ಈಗಿನ ಸುದ್ದಿ

ಕೃಷ್ಣಗೆ ಟಿಕೆಟ್ ಕೈ ತಪ್ಪಲು ನಾನು ಕಾರಣನಲ್ಲ: ಕೃಷ್ಣ ಬೈರೆಗೌಡ

ಕೃಷ್ಣಗೆ ಟಿಕೆಟ್ ಕೈ ತಪ್ಪಲು ನಾನು ಕಾರಣನಲ್ಲ: ಕೃಷ್ಣ ಬೈರೆಗೌಡ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಕೃಷ್ಣ ಅವರಿಗೆ ರಾಜ್ಯಸಭೆ ಟಿಕೆಟ್ ಕೈ ತಪ್ಪಲು ನಾನು ಕಾರಣನಲ್ಲ. ವಿನಾ ಕಾರಣ ನನ್ನ ವಿರುದ್ಧ ಆರೋಪ ಹೊರಿಸಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೆಗೌಡ ಅವರು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೃಷಿ ಸಚಿವ ಕೃಷ್ಣ ಬೈರೆಗೌಡ ಅವರು, ತಮ್ಮ ವಿರುದ್ಧ ಕೇಳಿ ಬರುತ್ತಿರುವ ಎಲ್ಲ ಆರೋಪಗಳನ್ನು ನಿರಾಕರಿಸಿದರು. ಎಸ್.ಎಂ.ಕೃಷ್ಣ ಅವರು ಪಕ್ಷದ ಹಿರಿಯ ಮುಖಂಡರು. ಪಕ್ಷದಲ್ಲಿ ಅವರ ಸೇವೆ ಶ್ಲಾಘನೀಯ. ಆದರೆ ರಾಜ್ಯಸಭೆಗೆ ಅವರನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ಕೈಗೊಂಡಿರುವ ನಿರ್ಧಾರದಲ್ಲಿ ನನ್ನ ಪಾತ್ರವಿಲ್ಲ.

ಆದರೆ ನನ್ನ ವಿರುದ್ಧವೇಕೆ ವಿನಾಕಾರಣ ಆರೋಪ ಹೊರಿಸಲಾಗುತ್ತಿದೆ ಎಂಬುದು ನನಗೆ ತಿಳಿಯುತ್ತಿಲ್ಲ. ಶೀಘ್ರದಲ್ಲಿಯೇ ನಾನು ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದು ಅವರು ಹೇಳಿದರು.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ರಾಜ್ಯಸಭೆ ಟಿಕೆಟ್ ಕೈ ತಪ್ಪಲು ಕೃಷ್ಣ ಬೈರೆಗೌಡ ಅವರೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್ ಅವರು ಪರೋಕ್ಷವಾಗಿ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಹೊಸ ವಿವಾದ ಭುಗಿಲೆದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.