ಮನಾಲಿ ದುರಂತ: ಹಿಮಾಚಲ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮಂಡಿ(ಹಿಮಾಚಲಪ್ರದೇಶ): ಹಿಮಾಚಲಪ್ರದೇಶದ ಬಿಯಾಸ್ ನದಿಯಲ್ಲಿ 24 ವಿದ್ಯಾರ್ಥಿಗಳು ಕೊಚ್ಚಿ ಹೋದ ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಹಿಮಾಚಲ ಸರ್ಕಾರಕ್ಕೆ ಮಂಗಳವಾರ ಹೈಕೋರ್ಟ್ ನೋಟಿಸ್ ನೀಡಿದೆ.
ಭಾನುವಾರ ಬಿಯಾಸ್ ನದಿಯಲ್ಲಿ 24 ವಿದ್ಯಾರ್ಥಿಗಳು ಕೊಚ್ಚಿ ಹೋದ ದುರಂತ ಕುರಿತ ಸಂಪೂರ್ಣ ವರದಿಯನ್ನು ಜೂನ್ 16ರಯೊಳಗೆ ನೀಡುವಂತೆ ಹೈಕೋರ್ಟ್ ಸೂಚಿಸಿದೆ.
ಹೈದರಾಬಾದ್ನ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಎರಡನೇ ವರ್ಷದ ಎಲೆಕ್ಟ್ರಾನಿಕ್ಸ್ ಶಿಕ್ಷಣ ಪಡೆಯುತ್ತಿರುವ 48 ವಿದ್ಯಾರ್ಥಿಗಳನ್ನು ಒಳಗೊಂಡ ತಂಡ ಹಿಮಾಚಲ ಪ್ರದೇಶದಕ್ಕೆ ಪ್ರವಾಸಕ್ಕೆ ಹೋಗಿದ್ದರು. ಭಾನುವಾರ ಬಿಯಾಸ್ ನದಿ ದಡದ ಮೇಲೆ ನಿಂತು ಈ ಎಲ್ಲರೂ ಫೋಟೋ ತೆಗೆಸಿಕೊಳ್ಳುತ್ತಿದ್ದರು. ಅದೇ ವೇಳೆಗೆ ಲಾರ್ಜಿ ಜಲವಿದ್ಯುತ್ ಸ್ಥಾವರದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಯಿತು. ಇದರಿಂದ ದಿಢೀರ್ ಪ್ರವಾಸ ಸೃಷ್ಟಿಯಾಗಿ 24 ವಿದ್ಯಾರ್ಥಿಗಳು ಹಾಗೂ ಪ್ರಹ್ಲಾದ್ ಎಂಬ ಪ್ರವಾಸಿ ಮಾರ್ಗದರ್ಶಿ ಕ್ಷಣಾರ್ಧದಲ್ಲಿ ಕೊಚ್ಚಿ ಹೋಗಿದ್ದು, ಉಳಿದ 24 ವಿದ್ಯಾರ್ಥಿಗಳು ಕೂದಲೆಳೆಯಲ್ಲಿ ಪಾರಾಗಿದ್ದರು.
ಕೊಚ್ಚಿ ಹೋದ ಹೈದರಾಬಾದ್ ಮೂಲದ 24 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಓರ್ವ ಪ್ರವಾಸಿ ಮಾರ್ಗದರ್ಶಿ ಪೈಕಿ ನಾಲ್ವರು ವಿದ್ಯಾರ್ಥಿಗಳ ಶವವನ್ನು ಸೋಮವಾರ ಮೇಲಕ್ಕೆತ್ತಲಾಗಿದ್ದು, ಇಂದು ಒಂದು ಮೃತದೇಹ ಪತ್ತೆಯಾಗಿದೆ. ಉಳಿದ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಸುಮಾರು 643 ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ತೆಲಂಗಾಣ ಗೃಹ ಸಚಿವ ನರಸಿಂಹರೆಡ್ಡಿ ಹಾಗೂ ವಿದ್ಯಾರ್ಥಿಗಳ ಪಾಲಕರು ಬೀಡು ಬಿಟ್ಟಿದ್ದು, ಕಾರ್ಯಾಚರಣೆಯನ್ನು ತೀವ್ರ ಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ.
ಘಟನೆಯ ಕುರಿತು ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಮ್ಯಾಜಿಸ್ಟ್ರೇಟ್ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಲಾರ್ಜಿ ಜಲವಿದ್ಯುತ್ ಸ್ಥಾವರದಿಂದ ಇದ್ದಕ್ಕಿದ್ದಂತೆ ಭಾರಿ ಪ್ರಮಾಣದ ನೀರು ಹೊರಬಿಡುವ ಮೂಲಕ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ಹಿರಿಯ ಇಂಜಿನಿಯರ್ಗಳು ಹಾಗೂ ಒಬ್ಬ ಫಿಟ್ಟರ್ನನ್ನು ಅಮಾನತುಗೊಳಿಸಿದ್ದಾರೆ. ಈ ನಡುವೆ ಘಟನಾ ಸ್ಥಳಕ್ಕೆ ವೀರಭದ್ರ ಅವರಲ್ಲದೆ, ಕೇಂದ್ರ ಮಾನವಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಕೂಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


